×
Ad

ನನ್ನ ವೈಯಕ್ತಿಕ ಅಭಿಪ್ರಾಯದಲ್ಲಿ ಆರೆಸ್ಸೆಸ್ ಅನ್ನು ನಿಷೇಧಿಸಬೇಕು: ಮಲ್ಲಿಕಾರ್ಜುನ ಖರ್ಗೆ

Update: 2025-10-31 16:53 IST

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Photo: X)

ಹೊಸದಿಲ್ಲಿ: ದೇಶದ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗಳಿಗೆ ಕಾರಣವಾಗಿರುವುದರಿಂದ ಆರೆಸ್ಸೆಸ್ ಅನ್ನು ನಿಷೇಧಿಸಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಆರೆಸ್ಸೆಸ್ ನಿಷೇಧದ ಕುರಿತ ಪ್ರಶ್ನೆಗೆ ಉತ್ತರಿಸಿದ ಮಲ್ಲಿಕಾರ್ಜುನ ಖರ್ಗೆ, ಇದು ನನ್ನ ವೈಯಕ್ತಿಕ ಅಭಿಪ್ರಾಯ, ಅದನ್ನು ಮಾಡಬೇಕು. ಹೆಚ್ಚಿನ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗಳು ಬಿಜೆಪಿ-ಆರೆಸ್ಸೆಸ್‌ನಿಂದಾಗಿ ಉದ್ಭವಿಸುತ್ತಿವೆ ಎಂದು ಹೇಳಿದರು.

ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಪುಣ್ಯತಿಥಿ ಮತ್ತು ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮ ದಿನಾಚರಣೆ ಹಿನ್ನೆಲೆ ಅವರನ್ನು ಸ್ಮರಿಸಿದ ಖರ್ಗೆ, ಉಕ್ಕಿನ ಮನುಷ್ಯ ಮತ್ತು ಉಕ್ಕಿನ ಮಹಿಳೆ ಇಬ್ಬರೂ ಭಾರತದ ಏಕತೆ ಮತ್ತು ಸಮಗ್ರತೆಗಾಗಿ ಶ್ರಮಿಸಿದರು ಎಂದು ಹೇಳಿದರು.

ಸರ್ದಾರ್ ಪಟೇಲ್ ಅವರು ಶ್ಯಾಮ ಪ್ರಸಾದ್ ಮುಖರ್ಜಿ ಅವರಿಗೆ 1948ರ ಫೆಬ್ರವರಿ 4ರಂದು ಬರೆದ ಪತ್ರವನ್ನು ಉಲ್ಲೇಖಿಸಿ, ಮಹಾತ್ಮ ಗಾಂಧಿಯ ಹತ್ಯೆಯ ನಂತರ ಆರೆಸ್ಸೆಸ್ ಸಂತೋಷ ವ್ಯಕ್ತಪಡಿಸಿದ್ದರಿಂದ ಪರಿಸ್ಥಿತಿ ಹದಗೆಟ್ಟಿತು. ಸರಕಾರಕ್ಕೆ ಅದರ ವಿರುದ್ಧ ಕ್ರಮ ಕೈಗೊಳ್ಳುವುದು ಅನಿವಾರ್ಯವಾಯಿತು. ಆರೆಸ್ಸೆಸ್ ಮತ್ತು ಹಿಂದೂ ಮಹಾಸಭಾದ ಚಟುವಟಿಕೆಗಳು ಗಾಂಧಿಯವರ ಹತ್ಯೆಗೆ ಕಾರಣವಾದ ವಾತಾವರಣವನ್ನು ಸೃಷ್ಟಿಸಿತ್ತು ಎಂದು ವರದಿಗಳು ದೃಢಪಡಿಸಿದವು ಎಂದು ಹೇಳಿದರು.

ಇತರೆ ರಾಜಪ್ರಭುತ್ವದ ರಾಜ್ಯಗಳಂತೆ ಇಡೀ ಕಾಶ್ಮೀರವನ್ನು ಭಾರತಕ್ಕೆ ಸೇರಿಸಲು ಪಟೇಲ್ ಬಯಸಿದ್ದರು. ಆದರೆ, ಆಗಿನ ಪ್ರಧಾನಿ ನೆಹರೂ ಅದಕ್ಕೆ ಅವಕಾಶ ನೀಡಲಿಲ್ಲ ಎಂದು ಪ್ರಧಾನಿ ಮೋದಿ ಹೇಳಿಕೆ ಬೆನ್ನಲ್ಲೆ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News