×
Ad

ದಿಲ್ಲಿಯಲ್ಲಿ ಇಂಡಿಯಾ ಮೈತ್ರಿಕೂಟದ ಮಹತ್ವದ ಸಭೆ

Update: 2024-06-01 17:03 IST

ಹೊಸದಿಲ್ಲಿ: ಇಂದು ಸಂಜೆ ಲೋಕಸಭಾ ಚುನಾವಣೆಯ ಕೊನೆಯ ಹಂತ ಮುಕ್ತಾಯಗೊಳ್ಳುತ್ತಿರುವ ನಡುವೆ ಇಂಡಿಯಾ ಮೈತ್ರಿಕೂಟ ತನ್ನ ಮಹತ್ವದ ಸಭೆಯನ್ನು ರಾಜಧಾನಿಯಲ್ಲಿ ನಡೆಸುತ್ತಿದೆ. ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಹಲವು ಪ್ರಮುಖ ನಾಯಕರು ಭಾಗವಹಿಸುತ್ತಿದ್ದಾರೆ. ಆಪ್‌ ನಾಯಕ, ದಿಲ್ಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌, ಆಪ್‌ ನಾಯಕ ಸಂಜಯ್‌ ಸಿಂಗ್‌, ಸಿಪಿಎಂ ನಾಯಕ ಸೀತಾರಾಂ ಯೆಚೂರಿ ನ್ಯಾಷನಲ್‌ ಕಾನ್ಫರೆನ್ಸ್‌ ಮುಖಂಡ ಫಾರೂಕ್ ಅಬ್ದುಲ್ಲಾ ಮತ್ತಿತರರು ಈಗಾಗಲೇ ಆಗಮಿಸಿದ್ದಾರೆ.

ಪ‌ಶ್ಚಿಮ ಬಂಗಾಳದಲ್ಲಿ ಕೊನೆಯ ಹಂತದ ಚುನಾವಣೆ ನಡೆಯುತ್ತಿರುವುದರಿಂದ ಹಾಗೂ ಚಂಡಮಾರುತ ರೆಮಾಲ್‌ ಪರಿಹಾರ ಕಾರ್ಯಾಚರಣೆಯ ಹಿನ್ನೆಲೆಯಲ್ಲಿ ಅಲ್ಲಿನ ಆಡಳಿತ ತೃಣಮೂಲ ಕಾಂಗ್ರೆಸ್‌ ನಾಯಕರು ಭಾಗವಹಿಸುತ್ತಿಲ್ಲ.

ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಮತ ಎಣಿಕೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಸಭೆ ಕರೆಯಲಾಗಿದೆ ಎನ್ನಲಾಗಿದೆಯಾದರೂ, ಇಂಡಿಯಾ ಮೈತ್ರಿಕೂಟ ಯಾವುದೇ ಸಂದರ್ಭದಲ್ಲೂ ಜೊತೆಗಿರಬೇಕೆಂಬ ಇಚ್ಛೆಯಿಂದ ಸಭೆ ನಡೆಸಲಾಗುತ್ತಿದೆ ಎನ್ನಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News