×
Ad

ಉಪರಾಷ್ಟ್ರಪತಿ ಚುನಾವಣೆ: ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿ ಬಗ್ಗೆ ಇಂದು ಚರ್ಚೆ

Update: 2025-08-18 09:06 IST

PC | timesofindia.indiatimes.com

ಹೊಸದಿಲ್ಲಿ: ಉಪರಾಷ್ಟ್ರಪತಿ ಚುನಾವಣೆಯಲ್ಲಿ ಸ್ಪರ್ಧಿಸುವ ಇಂಡಿಯಾ ಮೈತ್ರಿಕೂಟದ ಒಮ್ಮತದ ಅಭ್ಯರ್ಥಿ ಬಗ್ಗೆ ಕೂಟದ ಮಿತ್ರಪಕ್ಷಗಳು ಸೋಮವಾರ ಚರ್ಚೆ ನಡೆಸಲಿವೆ. ಬಿಹಾರದಲ್ಲಿ ಕೈಗೊಂಡಿರುವ ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದಂತ ಆಡಳಿತಾರೂಢ ಎನ್ಡಿಎ ಹಾಗೂ ವಿರೋಧ ಪಕ್ಷಗಳ ನಡುವೆ ನಡೆಯುತ್ತಿರುವ ಸಂಘರ್ಷದ ಹಿನ್ನೆಲೆಯಲ್ಲಿ, ಮಳೆಗಾಲದ ಅಧಿವೇಶನ ಸಂಪೂರ್ಣ ಕೊಚ್ಚಿಕೊಂಡು ಹೋಗಿರುವ ಹಿನ್ನೆಲೆಯಲ್ಲಿ ಸಂಸದೀಯ ಕಲಾಪದ ಬಗ್ಗೆ ಕೂಡಾ ಪಕ್ಷಗಳು ಚರ್ಚೆ ನಡೆಸಲಿವೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ನಿವಾಸದಲ್ಲಿ ಮೈತ್ರಿಕೂಟದ ಎಲ್ಲ ಪಕ್ಷಗಳ ಸದನ ನಾಯಕರು ಸಭೆ ಸೇರಿ ಚರ್ಚೆ ನಡೆಸಲಿದ್ದಾರೆ. ಉಪರಾಷ್ಟ್ರಪತಿ ಚುನಾವಣೆ ಮತ್ತು ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ವಿರಾಮದ ಬಳಿಕ ಮುಂದುವರಿಯುವ ಸಂಸತ್ ಅಧಿವೇಶದಲ್ಲಿ ವಿರೋಧ ಪಕ್ಷಗಳ ಕಾರ್ಯತಂತ್ರದ ಬಗ್ಗೆ ಕೂಡಾ ಚರ್ಚೆ ನಡೆಯುವುದರಿಂದ ಈ ಸಭೆಗೆ ವಿಶೇಷ ಮಹತ್ವ ಬಂದಿದೆ.

ಮಹಾರಾಷ್ಟ್ರ ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್ ಅವರನ್ನು ಎನ್ಡಿಎ ಅಧಿಕೃತ ಅಭ್ಯರ್ಥಿಯಾಗಿ ಈಗಾಗಲೇ ಘೋಷಿಸಿರುವ ಹಿನ್ನೆಲೆಯಲ್ಲಿ ಮೈತ್ರಿಕೂಟ ಕೂಡಾ ತನ್ನ ಅಭ್ಯರ್ಥಿಯ ಹೆಸರು ಅಂತಿಮಪಡಿಸಲಿದೆ. ಆಡಳಿತಾರೂಢ ಪಕ್ಷಕ್ಕಿಂತ ಸೈದ್ಧಾಂತಿಕವಾಗಿ ಸಂಪೂರ್ಣ ಭಿನ್ನವಾಗಿರುವ ಸಿದ್ಧಾಂತದ ಅಭ್ಯರ್ಥಿಯನ್ನು ಒಮ್ಮತದ ಅಭ್ಯರ್ಥಿಯಾಗಿ ಆಯ್ಕೆ ಮಾಡುವುದಾಗಿ ವಿರೋಧ ಪಕ್ಷಗಳು ಈಗಾಗಲೇ ತಾತ್ವಿಕ ಒಪ್ಪಂದಕ್ಕೆ ಬಂದಿವೆ.

ಕೊಯಮತ್ತೂರು ಲೋಕಸಭಾ ಕ್ಷೇತ್ರದಿಂದ ಎರಡು ಬಾರಿ ಆಯ್ಕಯಾಗಿರುವ ರಾಧಾಕೃಷ್ಣನ್ (68) ಅವರ ಹೆಸರನ್ನು ಬಿಜೆಪಿ ಸಂಸದೀಯ ಮಂಡಳಿ ಭಾನುವಾರ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಘೋಷಿಸಿದ್ದು, ಅವರು ಉಪರಾಷ್ಟ್ರಪತಿಯಾಗಿ ಆಯ್ಕೆಯಾಗುವುದು ಬಹುತೇಕ ಖಚಿತ. ಆಡಳಿತಾರೂಢ ಮೈತ್ರಿಕೂಟ 427 ಸಂಸದರ ಬಲ ಹೊಂದಿದ್ದು, ವಿರೋಧ ಪಕ್ಷಗಳ ಒಟ್ಟು ಸದಸ್ಯಬಲ 354 ಆಗಿದೆ. ಗೆಲುವಿಗೆ 392 ಮತಗಳ ಅಗತ್ಯವಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News