×
Ad

ಮುಂಗಾರು ಅಧಿವೇಶನ: ಎಸ್ಐಆರ್ ವಿರುದ್ಧ ಸಂಸತ್ತಿನ ಆವರಣದಲ್ಲಿ ಇಂಡಿಯಾ ಮೈತ್ರಿಕೂಟದ ಸಂಸದರಿಂದ ಪ್ರತಿಭಟನೆ

Update: 2025-07-28 12:31 IST

Screengrab:X/@PTI_News

ಹೊಸದಿಲ್ಲಿ : ಬಿಹಾರದಲ್ಲಿ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ(SIR) ವಿರುದ್ಧ ಸಂಸತ್ತಿನ ಆವರಣದಲ್ಲಿ ಇಂಡಿಯಾ ಮೈತ್ರಿಕೂಟದ ಸಂಸದರು ಪ್ರತಿಭಟನೆ ನಡೆಸಿದ್ದಾರೆ.

ಕಾಂಗ್ರೆಸ್‌ ಸಂಸದೆ ಪ್ರಿಯಾಂಕಾ ಗಾಂಧಿ ಸೇರಿದಂತೆ ಸಂಸದರು ʼಎಸ್‌ಐಆರ್‌ ನಿಲ್ಲಿಸಿʼ ಎಂದು ಪೋಸ್ಟರ್‌ಗಳನ್ನು ಹಿಡಿದು ಸಂಸತ್ತಿನ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಬಿಹಾರದಲ್ಲಿ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ(SIR) ಬಗ್ಗೆ ಚರ್ಚೆಯಾಗಬೇಕೆಂದು ವಿಪಕ್ಷಗಳು ಪಟ್ಟು ಹಿಡಿದ ಕಾರಣ ಲೋಕಸಭೆಯ ಕಲಾಪವನ್ನು ಅಲ್ಪ ಕಾಲ ಮುಂದೂಡಲಾಗಿತ್ತು. ಇದೀಗ ಲೋಕಸಭೆಯ ಕಲಾಪ ಮತ್ತೆ ಪ್ರಾರಂಭವಾಗಿದೆ. ರಾಜ್ಯಸಭೆಯ ಕಲಾಪ ಮಧ್ಯಾಹ್ನ 2ರವರೆಗೆ ಮುಂದೂಡಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News