×
Ad

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಮಹಾಭಿಯೋಗ ಪ್ರಸ್ತಾವನೆ ಮಂಡಿಸಲು ಮುಂದಾದ ಪ್ರತಿಪಕ್ಷಗಳು : ವರದಿ

Update: 2025-08-18 11:42 IST

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್

ಹೊಸದಿಲ್ಲಿ: 'ಮತ ಕಳ್ಳತನʼ ಆರೋಪದ ಮೇಲೆ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಸಂಸತ್ತಿನಲ್ಲಿ ಮಹಾಭಿಯೋಗ ಪ್ರಸ್ತಾವನೆ ಮಂಡಿಸಲು ವಿರೋಧ ಪಕ್ಷಗಳ ಇಂಡಿಯಾ ಮೈತ್ರಿಕೂಟ ನಿರ್ಧರಿಸಿರುವ ಬಗ್ಗೆ ವರದಿಯಾಗಿದೆ.

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಮತ್ತು ಮತ ಕಳ್ಳತನದ ವಿರುದ್ಧ ವಿರೋಧ ಪಕ್ಷಗಳು ಪ್ರತಿಭಟನೆಯನ್ನು ತೀವ್ರಗೊಳಿಸುತ್ತಿದೆ. ಈ ಮಧ್ಯೆ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ವಿರುದ್ಧ ದೋಷಾರೋಪಣೆ ಮಾಡಲು ಇಂಡಿಯಾ ಮೈತ್ರಿಕೂಟ ನಿರ್ಧರಿಸಿದೆ ಎಂದು ಹೇಳಲಾಗಿದೆ.

ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ನಡೆದ ಇಂಡಿಯಾ( I.N.D.I.A) ಮೈತ್ರಿಕೂಟದ ನಾಯಕರ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಲಾಗಿದೆ.

ಮುಖ್ಯ ಚುನಾವಣಾ ಆಯುಕ್ತರನ್ನು ಮಹಾಭಿಯೋಗದ ಮೂಲಕ ಮಾತ್ರ ತೆಗೆದುಹಾಕಬಹುದು. ಮತಕಳ್ಳತನ ಆರೋಪದ ಕುರಿತು ಜ್ಞಾನೇಶ್ ಕುಮಾರ್ ರವಿವಾರ ಪತ್ರಿಕಾಗೋಷ್ಠಿ ನಡೆಸಿದ್ದರು. ಇದಾದ ಒಂದು ದಿನದ ನಂತರ ಈ ಬೆಳವಣಿಗೆ ನಡೆದಿದೆ.

ಕಾಂಗ್ರೆಸ್ ಸಂಸದ ಇಮ್ರಾನ್ ಪ್ರತಾಪ್‌ಗಢಿ ಈ ಕುರಿತು ಪ್ರತಿಕ್ರಿಯಿಸಿ, ನಾವು ಶೀಘ್ರದಲ್ಲೇ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.

ಮುಖ್ಯ ಚುನಾವಣಾ ಆಯುಕ್ತರನ್ನು ಪದಚ್ಯುತಿಗೊಳಿಸಲು ಸಂಸತ್ತಿನ ಎರಡೂ ಸದನಗಳಲ್ಲಿ ಮೂರನೇ ಎರಡರಷ್ಟು ಬಹುಮತದ ಅಗತ್ಯವಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News