ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿ ಬಿ. ಸುದರ್ಶನ್ ರೆಡ್ಡಿಯಿಂದ ನಾಮಪತ್ರ ಸಲ್ಲಿಕೆ
Update: 2025-08-21 12:28 IST
Screengrab:X/@PTI_News
ಹೊಸದಿಲ್ಲಿ: ಇಂದು (ಗುರುವಾರ) ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿ ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಾಧೀಶ ಬಿ.ಸುದರ್ಶನ್ ರೆಡ್ಡಿ ಅವರು ಉಪ ರಾಷ್ಟ್ರಪತಿ ಚುನಾವಣೆಗೆ ತಮ್ಮ ನಾಮಪತ್ರ ಸಲ್ಲಿಸಿದರು.
ಈ ವೇಳೆ ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭಾ ವಿಪಕ್ಷ ನಾಯಕ ಎಂ.ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಉಪಸ್ಥಿತರಿದ್ದರು.