×
Ad

ಗಾಝಾ ಶಾಂತಿ ಶೃಂಗಸಭೆ: ಈಜಿಪ್ಟ್ ಗೆ ತೆರಳಲಿರುವ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಕೀರ್ತಿ ವರ್ಧನ್

Update: 2025-10-12 21:34 IST

ಹೊಸದಿಲ್ಲಿ: ಸೋಮವಾರ ಈಜಿಪ್ಟ್ ನ ಶರ್ಮ್-ಎಲ್ ಶೇಖ್ ನಲ್ಲಿ ಆಯೋಜನೆಗೊಂಡಿರುವ ಗಾಝಾ ಶಾಂತಿ ಶೃಂಗಸಭೆಗೆ ಪ್ರಧಾನಿ ನರೇಂದ್ರ ಮೋದಿಯವರ ವಿಶೇಷ ರಾಯಭಾರಿಯಾಗಿ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಕೀರ್ತಿ ವರ್ಧನ್ ತೆರಳುವ ಸಾಧ್ಯತೆ ಇದೆ ಎಂದು The Indian Express ಸುದ್ದಿ ಸಂಸ್ಥೆ ವರದಿ ಮಾಡಿದೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾ ಅಲ್-ಸಿಸಿ ಅವರು ಶೃಂಗಸಭೆಯಲ್ಲಿ ಪಾಲ್ಗೊಳ್ಳುವಂತೆ ಶನಿವಾರ ತಡವಾಗಿ ಪ್ರಧಾನಿ ನರೇಂದ್ರ ಮೋದಿಗೆ ಆಹ್ವಾನ ನೀಡಿದ ಹಿನ್ನೆಲೆಯಲ್ಲಿ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಕೀರ್ತಿ ವರ್ಧನ್ ಅವರನ್ನು ಶೃಂಗಸಭೆಗೆ ಕಳಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.

ಈ ಶೃಂಗಸಭೆಯಲ್ಲಿ ಜರ್ಮನಿಯ ಚಾನ್ಸೆಲರ್ ಫ್ರೆಡ್ರಿಕ್ ಮರ್ಝ್, ಫ್ರಾನ್ಸ್ ಅಧ್ಯಕ್ಷ ಎಮ್ಯಾನ್ಯುಯೆಲ್ ಮ್ಯಾಕ್ರನ್, ಸ್ಪೇನ್ ಪ್ರಧಾನಿ ಪೆಡ್ರೊ ಸ್ಯಾಂ ಚೆಝ್ ಹಾಗೂ ವಿಶ್ವ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆ್ಯಂಟೊನಿಯೊ ಗುಟೆರಸ್ ಕೂಡಾ ಪಾಲ್ಗೊಳ್ಳುವ ನಿರೀಕ್ಷೆ ಇದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News