×
Ad

ಶೇಖ್ ಹಸೀನಾಗೆ ಭಾರತ ನೆರವು ನೀಡಲಿದೆ, ಬಾಂಗ್ಲಾದೇಶ ಸೇನೆಯೊಂದಿಗೆ ಸಂಪರ್ಕದಲ್ಲಿದ್ದೇವೆ: ಸರ್ವಪಕ್ಷಗಳ ಸಭೆಯಲ್ಲಿ ಜೈಶಂಕರ್ ಹೇಳಿಕೆ

Update: 2024-08-06 12:56 IST

Photo: PTI

ಹೊಸದಿಲ್ಲಿ: ಸೋಮವಾರ ಸಂಜೆ ಭಾರತಕ್ಕೆ ಆಗಮಿಸಿರುವ ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾರಿಗೆ ನೆರವಿನ ಭರವಸೆ ನೀಡಲಾಗಿದ್ದು, ಮುಂದಿನ ಕ್ರಮದ ಕುರಿತು ನಿರ್ಣಯಿಸಲು ಸಮಯಾವಕಾಶ ಒದಗಿಸಲಾಗಿದೆ ಎಂದು ಮಂಗಳವಾರ ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಸರ್ವಪಕ್ಷಗಳ ಸಭೆಯ ವಿವರಣೆಯಲ್ಲಿ ತಿಳಿಸಿದ್ದಾರೆ ಎಂದು ಹೇಳಲಾಗಿದೆ.

ಬಾಂಗ್ಲಾದೇಶದಲ್ಲಿರುವ 10,000ಕ್ಕೂ ಹೆಚ್ಚು ಮಂದಿ ಭಾರತೀಯ ವಿದ್ಯಾರ್ಥಿಗಳ ಸುರಕ್ಷತೆಯನ್ನು ಖಾತರಿಗೊಳಿಸುವಂತೆ ಮಾಡಲು ಬಾಂಗ್ಲಾದೇಶ ಸೇನೆಯೊಂದಿಗೆ ಸಂಪರ್ಕದಲ್ಲಿದ್ದೇವೆ ಎಂದು ಸಂಸತ್ ಭವನದಲ್ಲಿ ನಡೆದ ಸರ್ವಪಕ್ಷಗಳ ಸಭೆಯ ವಿವರಣೆಯ ಸಂದರ್ಭದಲ್ಲಿ ಅವರು ಹೇಳಿದ್ದಾರೆ.

ಈ ಸಭೆಯ ಕುರಿತು ಎಕ್ಸ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ ಎಸ್.ಜೈಶಂಕರ್, “ಬಾಂಗ್ಲಾದೇಶದಲ್ಲಿನ ಇತ್ತೀಚಿನ ಬೆಳವಣಿಗೆಗಳ ಕುರಿತು ಸಂಸತ್ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಸರ್ವಪಕ್ಷಗಳ ಸಭೆಯಲ್ಲಿ ವಿವರಿಸಲಾಯಿತು. ಈ ಕುರಿತು ಸರ್ವಪಕ್ಷಗಳ ಸರ್ವಾನುಮತದ ಬೆಂಬಲವನ್ನು ಅಭಿನಂದಿಸುತ್ತೇನೆ” ಎಂದು ಬರೆದುಕೊಂಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ಕೀರ್ತಿ ಚಿದಂಬರಂ, ಸರಕಾರವು ಬಾಂಗ್ಲಾದೇಶದಲ್ಲಿನ ಪರಿಸ್ಥಿತಿಯ ಕುರಿತು ಸರ್ವಪಕ್ಷಗಳ ಸಭೆಯಲ್ಲಿ ವಿವರಿಸಿತು ಎಂದು ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News