ಬಾಂಗ್ಲಾ ದೇಶಕ್ಕೆ ಪ್ರಯಾಣಿಸದಂತೆ ತನ್ನ ಪ್ರಜೆಗಳಿಗೆ ಭಾರತದ ಎಚ್ಚರಿಕೆ
Update: 2024-08-05 21:39 IST
PC : PTI
ಹೊಸದಿಲ್ಲಿ : ಬಾಂಗ್ಲಾದೇಶದಲ್ಲಿ ಹಿಂಸಾತ್ಮಕ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಮುಂದಿನ ಸೂಚನೆಯವರೆಗೆ ಆ ದೇಶಕ್ಕೆ ಪ್ರಯಾಣಿಸದಂತೆ ಭಾರತವು ತನ್ನ ಪ್ರಜೆಗಳಿಗೆ ಎಚ್ಚರಿಕೆ ನೀಡಿದೆ.
ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಪ್ರಸ್ತುತ ಬಾಂಗ್ಲಾದೇಶದಲ್ಲಿ ವಾಸವಾಗಿರುವ ಭಾರತೀಯ ಪ್ರಜೆಗಳಿಗೆ ಅತ್ಯಂತ ಜಾಗರೂಕರಾಗಿರುವಂತೆ ಮತ್ತು ಚಲನವಲನಗಳನ್ನು ನಿರ್ಬಂಧಿಸುವಂತೆ,ಅಗತ್ಯವಿದ್ದರೆ ಮಾತ್ರ ಮನೆಯಿಂದ ಹೊರಬರುವಂತೆ ಸೂಚಿಸಿದೆ.
8801958383679,8801958383680 ಮತ್ತು 8801937400591 ತುರ್ತು ದೂರವಾಣಿ ಸಂಖ್ಯೆಗಳ ಮೂಲಕ ಢಾಕಾದಲ್ಲಿಯ ಭಾರತೀಯ ರಾಯಭಾರ ಕಚೇರಿಯೊಂದಿಗೆ ಸಂಪರ್ಕದಲ್ಲಿರುವಂತೆಯೂ ಹೇಳಿದೆ.