×
Ad

ಮನಮೋಹನ್ ಸಿಂಗ್ ಅವರ ಗೌರವಾರ್ಥ ತೋಳಿಗೆ ಕಪ್ಪು ಪಟ್ಟಿ ಧರಿಸಿದ ಭಾರತೀಯ ಕ್ರಿಕೆಟಿಗರು

Update: 2024-12-27 11:25 IST

Photo credit: X/BCCI

ಮೆಲ್ಬೋರ್ನ್: ನಿನ್ನೆ ನಿಧನರಾದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಗೌರವಾರ್ಥವಾಗಿ, ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದ ಎರಡನೇ ದಿನ ಭಾರತ ಕ್ರಿಕೆಟ್ ತಂಡವು ಕೈಗೆ ಕಪ್ಪು ಪಟ್ಟಿಗಳನ್ನು ಧರಿಸಿ ಗಮನಸೆಳೆಯಿತು.

2004 ರಿಂದ 2014 ರವರೆಗೆ ಎರಡು ಬಾರಿ ಮಾಜಿ ಪ್ರಧಾನಿಯಾಗಿದ್ದ ಸಿಂಗ್, ವಯೋ ಸಹಜ ಕಾಯಿಲೆಗಳಿಂದಾಗಿ ನಿಧನರಾದರು. ಅವರಿಗೆ 92 ವರ್ಷ ವಯಸ್ಸಾಗಿತ್ತು.

"ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಸ್ಮರಣಾರ್ಥ ಗೌರವಾರ್ಥವಾಗಿ ಭಾರತ ತಂಡವು ಕೈಗೆ ಕಪ್ಪು ಪಟ್ಟಿಗಳನ್ನು ಧರಿಸಿದೆ" ಎಂದು ಬಿಸಿಸಿಐ ಹೇಳಿಕೆಯಲ್ಲಿ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News