×
Ad

ವಿಕಾಶ್‌ಶೀಲ್ ಇನ್ಸಾನ್ ಪಕ್ಷದ ಮುಖ್ಯಸ್ಥನ ತಂದೆಯ ಭೀಕರ ಹತ್ಯೆ

Update: 2024-07-16 11:05 IST

Photo credit: lokmattimes.com

ದರ್ಭಾಂಗ (ಬಿಹಾರ): ವಿಕಾಶ್‌ಶೀಲ್ ಇನ್ಸಾನ್ ಪಕ್ಷದ ಮುಖ್ಯಸ್ಥ ಮುಕೇಶ್ ಸಹಾನಿಯವರ ತಂದೆ ಜಿತನ್ ಸಹಾನಿ ಬಿಹಾರದ ದರ್ಭಾಂಗ ಜಿಲ್ಲೆಯ ತಮ್ಮ ಪೂರ್ವಜರ ನಿವಾಸದಲ್ಲಿ ಹತ್ಯೆಗೀಡಾಗಿರುವುದು ಕಂಡು ಬಂದಿದೆ ಎಂದು ಮಂಗಳವಾರ ಪೊಲೀಸರು ತಿಳಿಸಿದ್ದಾರೆ.

ಇಂದು (ಮಂಗಳವಾರ) ಬೆಳಗ್ಗೆ ಬಿರೌಲ್ ಪ್ರದೇಶದಲ್ಲಿರುವ ತಮ್ಮ ಪೂರ್ವಜರ ನಿವಾಸದಲ್ಲಿನ ಕೊಠಡಿಯೊಂದರಲ್ಲಿ ಜಿತನ್ ಸಹಾನಿಯವರ ಮೃತದೇಹ ಪತ್ತೆಯಾಗಿದ್ದು, ಅವರ ದೇಹದ ಮೇಲೆ ಗಾಯಗಳು ಹಾಗೂ ಎದೆ ಮತ್ತು ಹೊಟ್ಟೆಯ ಮೇಲೆ ಇರಿತದ ಗುರುತುಗಳು ಕಂಡು ಬಂದಿವೆ ಎಂದು ಹೇಳಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ದರ್ಭಾಂಗ್ ಜಿಲ್ಲೆಯ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಜಾಗುನಾಥ್ ರೆಡ್ಡಿ, ಹಿರಿಯ ಅಧಿಕಾರಿಗಳ ತಂಡವೊಂದು ಸ್ಥಳಕ್ಕೆ ಧಾವಿಸಿದ್ದು, ಘಟನೆಯ ಕುರಿತು ತನಿಖೆ ಕೈಗೊಂಡಿದೆ ಎಂದು ತಿಳಿಸಿದ್ದಾರೆ.

ಬಿಹಾರ ಸರಕಾರದ ಮಾಜಿ ಸಚಿವರಾದ ಮುಕೇಶ್ ಸಹಾನಿ ಅವರು ವಿಕಾಸ್‌ಶೀಲ್ ಇನ್ಸಾನ್ ಪಕ್ಷದ ಮುಖ್ಯಸ್ಥರಾಗಿದ್ದು, ಅವರ ಪಕ್ಷವು ಇಂಡಿಯಾ ಮೈತ್ರಿಕೂಟದ ಅಂಗ ಪಕ್ಷವಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News