×
Ad

ಇಂಡಿಗೊ ವಿಮಾನಕ್ಕೆ ಬಾಂಬ್ ಬೆದರಿಕೆ: ರಾಯ್ಪುರದಲ್ಲಿ ತುರ್ತು ಭೂಸ್ಪರ್ಶ

Update: 2024-11-14 11:51 IST

ಸಾಂದರ್ಭಿಕ ಚಿತ್ರ (PTI)

ರಾಯ್ಪುರ: ನಾಗಪುರದಿಂದ ಕೋಲ್ಕತ್ತಾಗೆ ತೆರಳುತ್ತಿದ್ದ ಇಂಡಿಗೊ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ, ಗುರುವಾರ ವಿಮಾನವನ್ನು ರಾಯ್ಪುರದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ವಿಮಾನದಲ್ಲಿ 187 ಪ್ರಯಾಣಿಕರು ಹಾಗೂ ಆರು ಮಂದಿ ಸಿಬ್ಬಂದಿಗಳಿದ್ದರು ಎನ್ನಲಾಗಿದೆ.

ವಿಮಾನ ನಿಲ್ದಾಣ ಪ್ರಾಧಿಕಾರಗಳು ಬಾಂಬ್ ಬೆದರಿಕೆ ಸ್ವೀಕರಿಸಿದ ಹಿನ್ನೆಲೆಯಲ್ಲಿ, ನಾಗಪುರದಿಂದ ಕೋಲ್ಕತ್ತಾಗೆ ತೆರಳುತ್ತಿದ್ದ ವಿಮಾನದ ಮಾರ್ಗವನ್ನು ರಾಯ್ಪುರಕ್ಕೆ ಬದಲಿಸಲಾಯಿತು ಎಂದು ರಾಯ್ಪುರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಸಿಂಗ್ ಹೇಳಿದ್ದಾರೆ.

ಸುಮಾರು 9 ಗಂಟೆಯ ವೇಳೆಗೆ ವಿಮಾನವು ಛತ್ತೀಸ್ ಗಢ ರಾಜಧಾನಿ ರಾಯ್ಪುರ ವಿಮಾನದಲ್ಲಿ ಭೂಸ್ಪರ್ಶ ಮಾಡಿತು ಹಾಗೂ ತಕ್ಷಣವೇ ಆ ವಿಮಾನವನ್ನು ಕಡ್ಡಾಯ ಭದ್ರತಾ ತಪಾಸಣೆಗಾಗಿ ಪ್ರತ್ಯೇಕ ಸ್ಥಳಕ್ಕೆ ಕರೆದೊಯ್ಯಲಾಯಿತು ಎಂದು ಅವರು ಹೇಳಿದ್ದಾರೆ.

ತಾಂತ್ರಿಕ ಸಿಬ್ಬಂದಿಗಳು ಹಾಗೂ ಬಾಂಬ್ ನಿಷ್ಕ್ರಿಯ ದಳ ವಿಮಾನವನ್ನು ತೀವ್ರ ಶೋಧ ನಡೆಸಿತು ಎಂದು ಅವರು ತಿಳಿಸಿದ್ದಾರೆ.

Full View

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News