×
Ad

ಮುಂಬೈ | 252 ಕೋಟಿ ರೂ. ಮೌಲ್ಯದ ಮಾದಕವಸ್ತು ಕಳ್ಳಸಾಗಣೆ ಪ್ರಕರಣ : ಸಾಮಾಜಿಕ ಮಾಧ್ಯಮ ಪ್ರಭಾವಿ 'ಓರ್ರಿ' ಗೆ ಸಮನ್ಸ್

Update: 2025-11-20 13:31 IST

ಓರ್ರಿ (Photo: Instagram/ @orry)

ಮುಂಬೈ: 252 ಕೋಟಿ ರೂ. ಮೌಲ್ಯದ ಮಾದಕ ದ್ರವ್ಯ ತಯಾರಿ ಮತ್ತು ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮ ಪ್ರಭಾವಿ ಓರ್ರಿ(ಓರ್ಹಾನ್ ಅವತ್ರಮಣಿ)ಗೆ ಮುಂಬೈ ಮಾದಕ ದ್ರವ್ಯ ವಿರೋಧಿ ಘಟಕದ ಪೊಲೀಸರು ಸಮನ್ಸ್ ಜಾರಿ ಮಾಡಿದ್ದಾರೆ.

ಮಾರ್ಚ್ 2024ರಲ್ಲಿ ಸಾಂಗ್ಲಿಯಲ್ಲಿ 252 ಕೋಟಿ ರೂ.ಮೆಫೆಡ್ರೋನ್ ವಶಪಡಿಸಿಕೊಂಡ ಪ್ರಕರಣದಲ್ಲಿ ದುಬೈನಿಂದ ಗಡೀಪಾರಾಗಿ ಬಂಧಿತನಾಗಿದ್ದ ಮಾದಕವಸ್ತು ಪೂರೈಕೆದಾರ ಮುಹಮ್ಮದ್ ಸಲೀಂ ಸೊಹೈಲ್ ಶೇಖ್ ನೀಡಿದ ಮಾಹಿತಿಯ ಆಧಾರದಲ್ಲಿ ಓರ್ರಿಗೆ ಸಮನ್ಸ್ ಜಾರಿ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ತನಿಖಾಧಿಕಾರಿಗಳ ಪ್ರಕಾರ, ಭಾರತ ಮತ್ತು ವಿದೇಶಗಳಲ್ಲಿ ರೇವ್ ಪಾರ್ಟಿಗಳನ್ನು ಆಯೋಜಿಸಿದ್ದಾಗಿ ಶೇಖ್ ವಿಚಾರಣೆಯ ಸಮಯದಲ್ಲಿ ಬಹಿರಂಗಪಡಿಸಿದ್ದಾನೆ. ಇದರಲ್ಲಿ ಹಲವಾರು ಬಾಲಿವುಡ್ ಸೆಲೆಬ್ರಿಟಿಗಳು ಭಾಗವಹಿಸಿದ್ದರು ಎನ್ನಲಾಗಿದೆ. ಈ ಕುರಿತು ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News