×
Ad

"ಐಎನ್ಎಸ್ ವಿಕ್ರಾಂತ್ ಪಾಕ್‌ಗೆ ನಿದ್ದೆಯಿಲ್ಲದ ರಾತ್ರಿಗಳನ್ನು ನೀಡಿದೆ": ನೌಕಾಪಡೆಯ ಯೊಧರ ಜೊತೆ ದೀಪಾವಳಿ ಆಚರಿಸಿದ ಪ್ರಧಾನಿ ಮೋದಿ

Update: 2025-10-20 13:19 IST

ಪ್ರಧಾನಿ ನರೇಂದ್ರ ಮೋದಿ (Photo: PTI)

ಹೊಸದಿಲ್ಲಿ : ಆಪರೇಷನ್ ಸಿಂಧೂರ್ ಸಮಯದಲ್ಲಿ ಐಎನ್ಎಸ್ ವಿಕ್ರಾಂತ್ ಪಾಕಿಸ್ತಾನಕ್ಕೆ ನಿದ್ದೆಯಿಲ್ಲದ ರಾತ್ರಿಗಳನ್ನು ನೀಡಿದೆ ಎಂದು ಪ್ರಧಾನಿ ಮೋದಿ ನೌಕಾಪಡೆಗೆ ಭಾರಿ ಪ್ರಶಂಸೆಯನ್ನು ವ್ಯಕ್ತಪಡಿಸಿದ್ದಾರೆ.

ಗೋವಾದ ಕರಾವಳಿಯಲ್ಲಿ ಐಎನ್ಎಸ್ ವಿಕ್ರಾಂತ್ ಯುದ್ಧನೌಕೆಯಲ್ಲಿ ಯೋಧರೊಂದಿಗೆ ಸಂವಾದ ನಡೆಸಿದ ಪ್ರಧಾನಿ ಮೋದಿ ಯೋಧರ ಜೊತೆ ದೀಪಾವಳಿ ಹಬ್ಬವನ್ನು ಆಚರಿಸಿದ್ದಾರೆ.

"ಐಎನ್ಎಸ್ ವಿಕ್ರಾಂತ್ ಭಾರತದ ಸಶಸ್ತ್ರ ಪಡೆಗಳ ಸಾಮರ್ಥ್ಯವನ್ನು ಪ್ರತಿಬಿಂಬಿಸುತ್ತದೆ. ಆಪರೇಷನ್ ಸಿಂಧೂರ್ ಸಮಯದಲ್ಲಿ ಅದರ ಹೆಸರೇ ಪಾಕಿಸ್ತಾನಕ್ಕೆ ನಿದ್ದೆಯಿಲ್ಲದ ರಾತ್ರಿಗಳನ್ನು ನೀಡಿದೆ. ಇದು ಕೇವಲ ಯುದ್ಧನೌಕೆಯಲ್ಲ, ಆದರೆ 21ನೇ ಶತಮಾನದ ಭಾರತದ ಕಠಿಣ ಪರಿಶ್ರಮ, ಪ್ರತಿಭೆ, ಸಾಮರ್ಥ್ಯ ಮತ್ತು ಬದ್ಧತೆಗೆ ಸಾಕ್ಷಿಯಾಗಿದೆ. ಯುದ್ಧ ಪ್ರಾರಂಭವಾಗುವ ಮೊದಲೇ ಶತ್ರುಗಳ ಧೈರ್ಯವನ್ನು ಕುಗ್ಗಿಸುವುದು ಐಎನ್ಎಸ್ ವಿಕ್ರಾಂತ್‌ನ ಶಕ್ತಿ ಎಂದು ಮೋದಿ ಹೇಳಿದರು.

ಎಪ್ರಿಲ್ 22ರ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಅರಬಿ ಸಮುದ್ರದಲ್ಲಿ ನೌಕಾಪಡೆಯನ್ನು ಕಟ್ಟೆಚ್ಚರದಲ್ಲಿ ಇರಿಸಲಾಗಿತ್ತು. ಐಎನ್ಎಸ್ ವಿಕ್ರಾಂತ್ ಸೇರಿದಂತೆ 8 ರಿಂದ 10 ಯುದ್ಧ ನೌಕೆಗಳನ್ನು ನಿಯೋಜಿಸಲಾಗಿತ್ತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News