×
Ad

ಬಾಂಗ್ಲಾದೇಶದ ಹಿಂದೂಗಳ ರಕ್ಷಣೆಯನ್ನು ಮಧ್ಯಂತರ ಸರ್ಕಾರ ಖಚಿತಪಡಿಸಲಿ: ಪ್ರಿಯಾಂಕಾ ಗಾಂಧಿ

Update: 2024-08-12 20:39 IST

ಪ್ರಿಯಾಂಕಾ ಗಾಂಧಿ | PC : PTI 

ಹೊಸದಿಲ್ಲಿ : ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ದಾಳಿಯ ಸುದ್ದಿಗಳು ಆತಂಕಕಾರಿಯಾಗಿದೆ. ಅಲ್ಲಿನ ಮಧ್ಯಂತರ ಸರ್ಕಾರ ಹಿಂದೂ, ಕ್ರಿಶ್ಚಿಯನ್‌ ಮತ್ತು ಬೌದ್ಧ ಸಮುದಾಯದ ಅಲ್ಪಸಂಖ್ಯಾತರ ರಕ್ಷಣೆಯನ್ನು ಖಚಿತಪಡಿಸಬೇಕು ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಒತ್ತಾಯಿಸಿದ್ದಾರೆ.

ಈ ಕುರಿತಂತೆ ಎಕ್ಸ್‌ ನಲ್ಲಿ ಪೋಸ್ಟ್ ಮಾಡಿರುವ ಪ್ರಿಯಾಂಕಾ, ‘ಯಾವುದೇ ನಾಗರಿಕ ಸಮಾಜದಲ್ಲಿ ಧರ್ಮ, ಜಾತಿ, ಭಾಷೆ ಅಥವಾ ಗುರುತಿನ ಆಧಾರದ ಮೇಲೆ ತಾರತಮ್ಯ, ಹಿಂಸಾಚಾರ ಮತ್ತು ದಾಳಿ ಮಾಡುವುದು ಸರಿಯಲ್ಲ’ ತಿಳಿಸಿದ್ದಾರೆ.

‘ಬಾಂಗ್ಲಾದೇಶದಲ್ಲಿ ಪರಿಸ್ಥಿತಿ ಸಹಜ ಸ್ಥಿತಿಗೆ ಬರಲಿದೆ. ಅಲ್ಲಿನ ಮಧ್ಯಂತರ ಸರ್ಕಾರ ಅಲ್ಪಸಂಖ್ಯಾತರ ರಕ್ಷಣೆಗೆ ನಿಲ್ಲುತ್ತದೆ ಎಂಬ ಭರವಸೆಯಿದೆ’ ಎಂದು ಅವರು ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News