×
Ad

ಭಾರತ-ಪಾಕ್ ನಡುವೆ ಉದ್ವಿಗ್ನತೆ | ಐಪಿಎಲ್ ಪಂದ್ಯಾವಳಿ ಅನಿರ್ದಿಷ್ಟಾವಧಿ ಸ್ಥಗಿತಗೊಳಿಸಿದ ಬಿಸಿಸಿಐ

Update: 2025-05-09 12:21 IST

ಸಾಂದರ್ಭಿಕ ಚಿತ್ರ (PTI)

ಹೊಸದಿಲ್ಲಿ : ಭಾರತ-ಪಾಕಿಸ್ತಾನದ ನಡುವಿನ ಉದ್ವಿಗ್ನತೆಯ ಹಿನ್ನೆಲೆ ಐಪಿಎಲ್ ಪಂದ್ಯಾವಳಿಯನ್ನು ಅನಿರ್ದಿಷ್ಟಾವಧಿ ಸ್ಥಗಿತಗೊಳಿಸಲಾಗಿದೆ ಎಂದು ಬಿಸಿಸಿಐ ತಿಳಿಸಿದೆ.

ಗುರುವಾರ ಹಿಮಾಚಲಪ್ರದೇಶದ ಧರ್ಮಶಾಲಾದಲ್ಲಿ ಪಂಜಾಬ್-ದಿಲ್ಲಿ ನಡುವೆ ನಡೆಯುತ್ತಿದ್ದ ಐಪಿಎಲ್ ಪಂದ್ಯಾಟವನ್ನು ಅರ್ಧಕ್ಕೆ ಮೊಟಕುಗೊಳಿಸಲಾಗಿತ್ತು. ಇದರ ಬೆನ್ನಲ್ಲೇ ಬಿಸಿಸಿಐ ಪಂದ್ಯಾವಳಿಯನ್ನು ಅನಿರ್ದಿಷ್ಟಾವಧಿ ಸ್ಥಗಿತಗೊಳಿಸುವ ನಿರ್ಧಾರವನ್ನು ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News