×
Ad

ಚತ್ತೀಸ್ಗಡದ ಕಬ್ಬಿಣದ ಅದಿರು ಗಣಿಯಲ್ಲಿ ಕುಸಿತ | ನಾಲ್ವರು ಸಾವು, ಹಲವರಿಗೆ ಗಾಯ

Update: 2024-02-28 23:08 IST

Photo: indiatoday.in 

ದಂತೇವಾಡ : ಚತ್ತೀಸ್ಗಢದ ದಂತೇವಾಡ ಜಿಲ್ಲೆಯಲ್ಲಿ ಮಂಗಳವಾರ ಕಬ್ಬಿಣದ ಅದಿರಿನ ಗಣಿ ಪ್ರದೇಶದಲ್ಲಿ ಕುಸಿತ ಸಂಭವಿಸಿದ ಪರಿಣಾಮ ನಾಲ್ವರು ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಿರಾಂದುಲ್ ಪೊಲೀಸ್ ಠಾಣಾ ವಾಪ್ತಿಯ, ಗಣಿಗಾರಿಕೆಗೆ ನ್ಯಾಷನಲ್ ಮಿನರಲ್ ಡೆವಲಪ್ಮೆಂಟ್ ಕಾರ್ಪೋರೇಶನ್ (ಎನ್ಎಂಡಿಸಿ)ಗೆ ಮಂಜೂರು ಮಾಡಲಾದ ಪ್ರದೇಶದಲ್ಲಿ ಅಪರಾಹ್ನ ಸುಮಾರು 3 ಗಂಟೆಗೆ ಈ ದುರ್ಘಟನೆ ಸಂಭವಿಸಿದೆ.

ಘಟನೆಯಲ್ಲಿ ಇತರ ಇಬ್ಬರು ಕಾರ್ಮಿಕರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಪ್ರದೇಶದಲ್ಲಿ ಗಣಿಗಾರಿಕೆ ಇನ್ನಷ್ಟೇ ಆರಂಭವಾಗಬೇಕಿದೆ. ಆದರೆ, 14 ಮಂದಿ ಕಾರ್ಮಿಕರು ನಿರ್ಮಾಣ ಕಾಮಗಾರಿಯಲ್ಲಿ ತೊಡಗಿದ್ದರು. ಈ ಸಂದರ್ಭ ದುರ್ಘಟನೆ ನಡೆದಿದೆ ಎಂದು ದಂತೇವಾಡದ ಪೊಲೀಸ್ ಅಧೀಕ್ಷಕ ಗೌರವ್ ರೈ ಹೇಳಿದ್ದಾರೆ. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News