×
Ad

ಗೃಹ ಬಂಧನದ ಭೀತಿ: ಕಾಂಗ್ರೆಸ್ ಕಚೇರಿಯಲ್ಲೇ ರಾತ್ರಿ ಕಳೆದ ವೈ.ಎಸ್.ಶರ್ಮಿಳಾ

Update: 2024-02-22 12:37 IST

Screengrab:X/@ANI

ವಿಜಯವಾಡ: ರಾಜ್ಯ ಸರಕಾರವು ನನ್ನನ್ನು ಗೃಹ ಬಂಧನದಲ್ಲಿಡುವ ಪ್ತಯತ್ನಕ್ಕೆ ಮುಂದಾಗಿದ್ದರಿಂದ, ನಾನು ಕಾಂಗ್ರೆಸ್ ಕಚೇರಿಯಲ್ಲಿ ರಾತ್ರಿ ಕಳೆಯಬೇಕಾಯಿತು ಎಂದು ಆಂಧ್ರಪ್ರದೇಶ ಕಾಂಗ್ರೆಸ್ ಮುಖ್ಯಸ್ಥೆ ಹಾಗೂ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ಸಹೋದರಿ ವೈ.ಎಸ್.ಶರ್ಮಿಳಾ ಆರೋಪಿಸಿದ್ದಾರೆ.

ವಿಜಯವಾಡದಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ವೈ.ಎಸ್.ಶರ್ಮಿಳಾ ಮಲಗಿರುವ ವಿಡಿಯೊ ಸದ್ಯ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ʼಮುಖ್ಯಮಂತ್ರಿ ಕಚೇರಿಗೆ ತೆರಳಿʼ ಎಂಬ ಪ್ರತಿಭಟನಾ ಯಾತ್ರೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ನೇತೃತ್ವವನ್ನು ವೈ.ಎಸ್‌. ಶರ್ಮಿಳಾ ವಹಿಸಿದ ನಂತರ ಈ ಬೆಳವಣಿಗೆ ನಡೆದಿದೆ.

ನಿರುದ್ಯೋಗಿ ಯುವಕರು ಹಾಗೂ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವಂತೆ ಕಾಂಗ್ರೆಸ್ ಪಕ್ಷವು ಈ ಪ್ರತಿಭಟನೆಯನ್ನು ನಡೆಸುತ್ತಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News