×
Ad

ಜೈಲಿನಲ್ಲಿದ್ದ ಗ್ಯಾಂಗ್‌ಸ್ಟರ್‌ - ರಾಜಕಾರಣಿ ಮುಖ್ತಾರ್ ಅನ್ಸಾರಿ ನಿಧನ

Update: 2024-03-28 22:57 IST

ಮುಖ್ತಾರ್ ಅನ್ಸಾರಿ | Photo: PTI 

ಹೊಸದಿಲ್ಲಿ : ಜೈಲಿನಲ್ಲಿದ್ದ ಗ್ಯಾಂಗ್‌ಸ್ಟರ್‌ - ರಾಜಕಾರಣಿ ಮುಖ್ತಾರ್ ಅನ್ಸಾರಿ (60) ಗುರುವಾರ ನಿಧನರಾದರು. ಅನ್ಸಾರಿ ಅವರ ಆರೋಗ್ಯ ಮತ್ತೆ ಹದಗೆಟ್ಟ ಹಿನ್ನೆಲೆಯಲ್ಲಿ ಬಂದಾ ಜಿಲ್ಲೆಯ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಅವರ ವಕೀಲರು ತಿಳಿಸಿದ್ದಾರೆ.

ಮಂಗಳವಾರ, ಅನ್ಸಾರಿ ಅವರನ್ನು ಬಂದಾ ಜೈಲಿನಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಬಿಡುಗಡೆ ಮಾಡಲಾಗಿತ್ತು.

ಗುರುವಾರ ಸಂಜೆ ಅನ್ಸಾರಿ ಅವರ ಸ್ಥಿತಿ ಮತ್ತೆ ಹದಗೆಟ್ಟಿತು. ನಂತರ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು ಎಂದು ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಮೌ ವಿಧಾನಸಭಾ ಕ್ಷೇತ್ರದಿಂದ ಐದು ಬಾರಿ ಶಾಸಕರಾಗಿದ್ದ ಅವರು ಎಂಟು ಪ್ರಕರಣಗಳಲ್ಲಿ ಆರೋಪಿಯಾಗಿದ್ದು, ಬಂದಾ ಜೈಲಿನಲ್ಲಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News