×
Ad

́ಜೈಲರ್‌́ ನಟ ವಿನಾಯಗನ್‌ ಬಂಧನ

Update: 2023-10-24 22:48 IST

Photo : Instagram/ actorvinayakan

ಕೊಚ್ಚಿ : ಇಲ್ಲಿನ ಪೊಲೀಸ್ ಠಾಣೆಯೊಂದರಲ್ಲಿ ಕುಡಿದ ಮತ್ತಿನಲ್ಲಿ ಗಲಾಟೆ ಎಬ್ಬಿಸಿದ ಆರೋಪದ ಮೇಲೆ ‘ಜೈಲರ್’ ನಟ ವಿನಾಯಗನ್ ಅವರನ್ನು ಕೇರಳ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ ಎಂದು ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ನಟ, ತನ್ನ ಅಪಾರ್ಟ್ಮೆಂಟ್ ನಲ್ಲಿ ಗದ್ದಲ ಎಬ್ಬಿಸಿದ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ವಿಚಾರಣೆಗೆ ಪೊಲೀಸರು ಎರ್ನಾಕುಲಂ ಟೌನ್ ನಾರ್ತ್ ಪೋಲೀಸ್ ಠಾಣೆಗೆ ಕರೆದಿದ್ದರು. ವಿಚಾರಣೆ ವೇಳೆ ವಿನಾಯಗನ್ ಗದ್ದಲ ಉಂಟುಮಾಡಿದರು ಎನ್ನಲಾಗಿದೆ.

ಪೊಲೀಸ್ ಠಾಣೆಯಲ್ಲಿ ಗಲಾಟೆ ಮಾಡಿದ್ದಕ್ಕಾಗಿ ಅವರನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಗತ್ಯ ವೈದ್ಯಕೀಯ ಪರೀಕ್ಷೆಗಾಗಿ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News