×
Ad

ಜೈಪುರ | ಕೋಚಿಂಗ್ ಸೆಂಟರ್ ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆ

Update: 2024-03-24 19:58 IST

ಜೈಪುರ : ಜೈಪುರ ಕೋಚಿಂಗ್ ಸೆಂಟರ್‌ ನಲ್ಲಿ ಒಟ್ಟಾಗಿ ಕಲಿಯುತ್ತಿದ್ದ 20 ವರ್ಷದ ಯುವಕ ಹಾಗೂ 19 ವರ್ಷದ ಯುವತಿ ರವಿವಾರ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಟ್ಟಣದ ಕಾರೊಂದರಲ್ಲಿ ವಿದ್ಯಾರ್ಥಿಗಳಾದ ಜತಿನ್ ಸೈನ್ ಹಾಗೂ ಅಂಕಿತಾ ಯಾದವ್ ಅವರು ಪ್ರಜ್ಞೆ ಕಳೆದುಕೊಂಡ ಸ್ಥಿತಿಯಲ್ಲಿ ಪತ್ತೆಯಾದರು ಎಂದು ಚೊಮು ಪೊಲೀಸ್ ಠಾಣೆಯ ಅಧಿಕಾರಿ ಪ್ರದೀಪ್ ಶರ್ಮಾ ತಿಳಿಸಿದ್ದಾರೆ.

ಅವರನ್ನು ಕೂಡಲೇ ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಅವರನ್ನು ಬದುಕಿಸಲು ಸಾಧ್ಯವಾಗಲಿಲ್ಲ. ವಿಷ ಸೇವಿಸಿ ಅವರು ಆತ್ಮಹತ್ಯೆ ಮಾಡಿಕೊಂಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ಅವರು ಹೇಳಿದ್ದಾರೆ.

‘‘ಪ್ರಾಥಮಿಕ ಮಾಹಿತಿಯ ಪ್ರಕಾರ ಇಬ್ಬರೂ ವಿದ್ಯಾರ್ಥಿಗಳು ಜೈಪುರದವರು. ಅವರು ಕೋಚಿಂಗ್ ಸೆಂಟರ್‌ ನಲ್ಲಿ ಒಟ್ಟಾಗಿ ಕಲಿಯುತ್ತಿದ್ದರು’’ ಎಂದು ಪ್ರದೀಪ್ ಶರ್ಮಾ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News