ಜಮ್ಮುಕಾಶ್ಮೀರ| 2025ರಲ್ಲಿ 311 ಮಾದಕ ವಸ್ತು ಮಾರಾಟಗಾರರ ಬಂಧನ
Update: 2026-01-03 20:46 IST
ಸಾಂದರ್ಭಿಕ ಚಿತ್ರ
ಜಮ್ಮು, ಜ. 3: ಮಾದಕ ವಸ್ತುಗಳ ವಿರುದ್ಧದ ನಿರಂತರ ಕಾರ್ಯಾಚರಣೆಯ ಭಾಗವಾಗಿ ಜಮ್ಮು ಪೊಲೀಸರು 2025ರಲ್ಲಿ 35 ಮಹಿಳೆಯರು ಸೇರಿದಂತೆ 311 ಮಾದಕ ವಸ್ತು ಮಾರಾಟಗಾರರನ್ನು ಬಂಧಿಸಿದ್ದಾರೆ. 60 ಕೋ. ರೂ.ಗೂ ಅಧಿಕ ಮೌಲ್ಯದ ಹೆರಾಯಿನ್ ಅನ್ನು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
ಇದಲ್ಲದೆ, 2025ರಲ್ಲಿ 11 ಮಂದಿ ಕಟ್ಟಾ ಮಾದಕ ವಸ್ತು ಮಾರಾಟಗಾರರನ್ನು ಪಿಐಟಿ-ಎನ್‌ಡಿಪಿಎಸ್ ಕಾಯ್ದೆ ಅಡಿಯಲ್ಲಿ ವಶಕ್ಕೆ ತೆಗೆದುಕೊಳ್ಳಲಾಗಿದೆ. 48 ಮಂದಿ ಆರೋಪಿಗಳಿಗೆ ಶಿಕ್ಷೆಯಾಗಿದೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.
2025ರಲ್ಲಿ ಜಮ್ಮು ಜಿಲ್ಲೆಯ ಪೊಲೀಸರು ಮಾದಕ ವಸ್ತುಗಳ ವಿರುದ್ಧ ಹೋರಾಡುವಲ್ಲಿ ಪ್ರಮುಖ ಪ್ರಗತಿ ಸಾಧಿಸಿದರು. ಮಾದಕ ವಸ್ತುಗಳ ವಿರುದ್ಧ ಶೂನ್ಯ ಸಹಿಷ್ಣುತಾ ನೀತಿ ಅನುಸರಿಸಿದರು. ಕಟ್ಟುನಿಟ್ಟಾದ ಕ್ರಮಗಳ ಜಾರಿ, ಗುಪ್ತಚರ ಆಧಾರಿತ ಕಾರ್ಯಾಚರಣೆ ಹಾಗೂ ಸಮುದಾಯ ಭಾಗವಹಿಸುವಿಕೆಯ ಮೂಲಕ ಇದನ್ನು ಮಾಡಿದರು ಎಂದು ಅವರು ಹೇಳಿದ್ದಾರೆ.