×
Ad

ಜಮ್ಮುಕಾಶ್ಮೀರ | ಟಾಟಾ ಸುಮೋ- ಟ್ರಕ್ ನಡುವೆ ಭೀಕರ ಅಪಘಾತ : ನಾಲ್ವರು ಮೃತ್ಯು, ಐವರಿಗೆ ಗಾಯ

Update: 2025-11-16 12:24 IST

ಸಾಂದರ್ಭಿಕ ಚಿತ್ರ | NDTV

ಶ್ರೀನಗರ: ಟಾಟಾ ಸುಮೋ ಮತ್ತು ಟ್ರಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ನಾಲ್ವರು ಮೃತಪಟ್ಟು, ಐವರು ಗಾಯಗೊಂಡಿರುವ ಘಟನೆ ಶನಿವಾರ ರಾತ್ರಿ ಜಮ್ಮುಕಾಶ್ಮೀರದ ಬುಡ್ಗಾಮ್ ಜಿಲ್ಲೆಯಲ್ಲಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶನಿವಾರ ರಾತ್ರಿ ಸುಮಾರು 10.30ರ ವೇಳೆಗೆ ಬುಡ್ಗಾಮ್ ನ ಪಾಲ್ಗರ್ ಬಳಿ ಟಾಟಾ ಸುಮೋ ಹಾಗೂ ಟ್ರಕ್ ನಡುವೆ  ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಗಾಯಗೊಂಡ ಒಂಭತ್ತು ಮಂದಿಯನ್ನು ಸಮೀಪದ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಪೈಕಿ ನಾಲ್ವರು ಮಾರ್ಗಮಧ್ಯದಲ್ಲೇ ಮೃತಪಟ್ಟಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.  

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News