×
Ad

ಜಮ್ಮು-ಕಾಶ್ಮೀರ: ಉಗ್ರರ ದಾಳಿಯಲ್ಲಿ ಐವರು ಭದ್ರತಾ ಸಿಬ್ಬಂದಿಗಳಿಗೆ ಗಾಯ

Update: 2024-05-04 22:15 IST

PC : NDTV 

ಶ್ರೀನಗರ: ಜಮ್ಮು-ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ ಶನಿವಾರ ಭಾರತೀಯ ವಾಯುಪಡೆಯ ವಾಹನ ಸೇರಿದಂತೆ ಎರಡು ವಾಹನಗಳ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ ಪರಿಣಾಮ ಐವರು ಭದ್ರತಾ ಸಿಬ್ಬಂದಿಗಳು ಗಾಯಗೊಂಡಿದ್ದಾರೆ.

ವಾಹನಗಳು ಪೂಂಛ್‌ನ ಸುರಾನಕೋಟ್ ಪ್ರದೇಶದಲ್ಲಿಯ ಸನಾಯಿ ಟಾಪ್‌ನತ್ತ ಚಲಿಸುತ್ತಿದ್ದಾಗ ಗುಂಡಿನ ದಾಳಿ ನಡೆದಿದ್ದು,ಗಾಯಾಳುಗಳನ್ನು ಉಧಮಪುರ ಜಿಲ್ಲೆಯ ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸೇನೆ ಮತ್ತು ಜಮ್ಮು-ಕಾಶ್ಮೀರ ಪೋಲಿಸರು ದಾಳಿಯಲ್ಲಿ ಭಾಗಿಯಾಗಿದ್ದ ಉಗ್ರರಿಗಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಭದ್ರತಾ ಅಧಿಕಾರಿಗಳು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News