ಜಮ್ಮುಕಾಶ್ಮೀರ: ಇಬ್ಬರು ಶಂಕಿತ ಉಗ್ರರ ಹತ್ಯೆ
Update: 2023-10-04 22:28 IST
Photo: NDTV
ಶ್ರೀನಗರ: ದಕ್ಷಿಣ ಕಾಶ್ಮೀರದ ಕುಲ್ಗಾಂವ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಹಾಗೂ ಶಂಕಿತ ಉಗ್ರರ ನಡುವೆ ಬುಧವಾರ ನಡೆದ ಗುಂಡಿನ ಕಾಳಗದಲ್ಲಿ ಇಬ್ಬರು ಶಂಕಿತ ಉಗ್ರರು ಹತರಾಗಿದ್ದಾರೆ. ಕುಜ್ಜರ್ ಪ್ರದೇಶದಲ್ಲಿ ಶಂಕಿತ ಉಗ್ರರು ಅಡಗಿರುವ ಖಚಿತ ಬೇಹುಗಾರಿಕೆ ಮಾಹಿತಿಯ ಹಿನ್ನೆಲೆಯಲ್ಲಿ ಭದ್ರತಾ ಪಡೆ ಶೋಧ ಕಾರ್ಯಾಚರಣೆ ನಡೆಸಿತು.
ಈ ಸಂದರ್ಭ ಭದ್ರತಾ ಪಡೆ ಹಾಗೂ ಶಂಕಿತ ಉಗ್ರರ ನಡುವೆ ಗುಂಡಿನ ಕಾಳಗ ನಡೆಯಿತು. ಗುಂಡಿನ ಕಾಳಗದಲ್ಲಿ ಇಬ್ಬರು ಶಂಕಿತ ಉಗ್ರರು ಹತರಾಗಿದ್ದಾರೆ ಎಂದು ಕಾಶ್ಮೀರ ವಲಯ ಪೊಲೀಸ್ ‘ಎಕ್ಸ್’ ಪೋಸ್ಟ್ ನಲ್ಲಿ ದೃಢಪಡಿಸಿದೆ.
ಅಲ್ಲದೆ, ಗುಂಡಿನ ಕಾಳಗ ಮುಂದುವರಿದಿದೆ ಎಂದು ತಿಳಿಸಿದೆ.