×
Ad

ಜಮ್ಮುಕಾಶ್ಮೀರ | ಗುಂಡಿನ ಕಾಳಗ ಇಬ್ಬರು ಶಂಕಿತ ಭಯೋತ್ಪಾದಕರು ಸಾವು

Update: 2024-05-07 20:52 IST

ಸಾಂದರ್ಭಿಕ ಚಿತ್ರ | PC : PTI

 

ಶ್ರೀನಗರ : ಜಮ್ಮು ಹಾಗೂ ಕಾಶ್ಮೀರದ ಕುಲ್ಗಾಂವ್ ಜಿಲ್ಲೆಯಲ್ಲಿ ಭದ್ರತಾ ಪಡೆ ಹಾಗೂ ಶಂಕಿತ ಭಯೋತ್ಪಾದಕರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಇಬ್ಬರು ಶಂಕಿತ ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಕುಲ್ಗಾಂವ್ ನ ರೆಡ್ವಾನಿ ಗ್ರಾಮದಲ್ಲಿ ಶಂಕಿತ ಭಯೋತ್ಪಾದಕರು ಇರುವ ಕುರಿತು ಖಚಿತ ಮಾಹಿತಿಯ ಹಿನ್ನೆಲೆಯಲ್ಲಿ ಭದ್ರತಾ ಪಡೆ ಸೋಮವಾರ ತಡ ರಾತ್ರಿ ಶೋಧ ಕಾರ್ಯಾಚರಣೆ ನಡೆಸಿತು ಎಂದು ಅವರು ಹೇಳಿದ್ದಾರೆ.

ಈ ಸಂದರ್ಭ ಶಂಕಿತ ಭಯೋತ್ಪಾದಕರು ಭದ್ರತಾ ಪಡೆ ಮೇಲೆ ಗುಂಡಿನ ದಾಳಿ ನಡೆಸಿದರು. ಇದಕ್ಕೆ ಭದ್ರತಾ ಪಡೆ ಪ್ರತಿ ದಾಳಿ ನಡೆಸಿತು. ಈ ಗುಂಡಿನ ಕಾಳಗದ ಸಂದರ್ಭ ಮಂಗಳವಾರ ಬೆಳಗ್ಗೆ ಶಂಕಿತ ಭಯೋತ್ಪಾದಕರು ಅಡಗಿದ್ದ ಮನೆಗೆ ಬೆಂಕಿ ಹತ್ತಿಕೊಂಡಿತು ಎಂದು ಅವರು ತಿಳಿಸಿದ್ದಾರೆ.

ಗುಂಡಿನ ಕಾಳಗ ನಡೆದ ಸ್ಥಳದಲ್ಲಿ ಕನಿಷ್ಠ ಇಬ್ಬರು ಶಂಕಿತ ಭಯೋತ್ಪಾದಕರ ಮೃತದೇಹಗಳು ಪತ್ತೆಯಾಗಿವೆ. ಮೃತಪಟ್ಟ ಶಂಕಿತ ಭಯೋತ್ಪಾದಕರ ಗುರುತು ಪತ್ತೆಯಾಗಿಲ್ಲ ಹಾಗೂ ಅವರು ಸೇರಿದ ಸಂಘಟನೆಗಳಿಗೆ ಕುರಿತು ತಿಳಿದು ಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News