×
Ad

ಭಾರೀ ಮಳೆಗೆ ಮುಳುಗಿದ ಜಮ್ಮು; ಶಾಲೆಗಳಿಗೆ ರಜೆ

Update: 2025-08-25 20:04 IST

ಸಾಂದರ್ಭಿಕ ಚಿತ್ರ | timesofindia

ಜಮ್ಮು, ಆ. 25: ಜಮ್ಮುವಿನಲ್ಲಿ ರವಿವಾರ ರಾತ್ರಿಯಿಡೀ ಧಾರಾಕಾರ ಮಳೆ ಸುರಿದಿದ್ದು, ತಗ್ಗು ಪ್ರದೇಶಗಳು ಜಲಾವೃತವಾಗಿವೆ, ವಾಹನಗಳು ಹಾನಿಗೀಡಾಗಿವೆ. ಸಾಮಾನ್ಯ ಜನಜೀವನ ಅಸ್ತವ್ಯಸ್ತಗೊಂಡಿದೆ.

ಎಲ್ಲಾ ಶಾಲೆಗಳಿಗೆ ರಜೆ ನೀಡಲಾಗಿದೆ. ಸೋಮವಾರ ನಡೆಯಲಿದ್ದ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಸೋಮವಾರ ಬೆಳಗ್ಗೆ 8.30ರ ವರೆಗೆ ಕಳೆದ 24 ಗಂಟೆಗಳಲ್ಲಿ ಜಮ್ಮುವಿನಲ್ಲಿ ದಾಖಲೆಯ 190.4 ಎಂಎಂ ಮಳೆ ಬಿದ್ದಿದೆ. ಇದು ಒಂದು ಶತಮಾನಕ್ಕೂ ಹೆಚ್ಚಿನ ಅವಧಿಯಲ್ಲಿ ಆಗಸ್ಟ್ ನಲ್ಲಿ ಸುರಿದ ಅತಿ ಹೆಚ್ಚಿನ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

1926 ಆಗಸ್ಟ್ 5ರಂದು 228.6 ಎಂಎಂ ಮಳೆ ಸುರಿದಿದೆ. ಇದು ದಾಖಲಾದ ಅತ್ಯಂತ ಗರಿಷ್ಠ ಮಳೆ. 2022 ಆಗಸ್ಟ್ 11ರಂದು 189.6 ಎಂಎಂ ಮಳೆ ಸುರಿದಿದ್ದು, ಇದು ದಾಖಲಾದ ಅತ್ಯಂತ ಎರಡನೇ ಗರಿಷ್ಠ ಮಳೆ.

ಮುಂದಿನ ಎರಡು ದಿನಗಳಲ್ಲಿ ಪ್ರತಿಕೂಲ ಹವಾಮಾನದ ಕುರಿತು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದ ಬಳಿಕ ಮುಖ್ಯಮಂತ್ರಿ ಉಮರ್ ಅಬ್ದುಲ್ಲಾ ಅವರು ಎಲ್ಲಾ ಇಲಾಖೆಗಳಿಗೆ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದ್ದಾರೆ.

ಆಗಸ್ಟ್ 27ರ ವರೆಗೆ ಎತ್ತರದ ಪ್ರದೇಶಗಳಲ್ಲಿ ಮೋಡ ಸ್ಫೋಟ, ಪ್ರವಾಹ ಹಾಗೂ ಭೂಕುಸಿತದೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

‘‘ನಿಯಂತ್ರಣ ಕೊಠಡಿ ಸಕ್ರಿಯವಾಗಿದೆ. ಮುಖ್ಯಮಂತ್ರಿ ಕಚೇರಿ ಇಲಾಖೆಗಳೊಂದಿಗೆ ಸಂಪರ್ಕದಲ್ಲಿದೆ. ಸಂತ್ರಸ್ತ ಪ್ರದೇಶಗಳಲ್ಲಿ ಒಳಚರಂಡಿ, ನೀರು ಸರಬರಾಜು ಹಾಗೂ ವಿದ್ಯುತ್ ಮರು ಸ್ಥಾಪನೆಗೆ ಆದ್ಯತೆ ನೀಡಲಾಗುತ್ತಿದೆ. ಮುನ್ನೆಚ್ಚರಿಕೆ ವಹಿಸುವಂತೆ ಜನರಿಗೆ ಸಲಹೆ ನೀಡಲಾಗಿದೆ’’ ಎಂದು ಮುಖ್ಯಮಂತ್ರಿ ಅವರ ಕಚೇರಿ ‘ಎಕ್ಸ್’ನ ಪೋಸ್ಟ್ ನಲ್ಲಿ ಹೇಳಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News