×
Ad

ಜಮ್ಮು-ಕಾಶ್ಮೀರ: ಸೇನಾ ವಾಹನಗಳ ಮೇಲೆ ಇನ್ನೊಂದು ಭಯೋತ್ಪಾದಕ ದಾಳಿ

Update: 2024-01-12 21:56 IST

ಸಾಂದರ್ಭಿಕ ಚಿತ್ರ | Photo: PTI

ಹೊಸದಿಲ್ಲಿ: ಜಮ್ಮು ಹಾಗೂ ಕಾಶ್ಮೀರದ ಪೂಂಛ್ ನಲ್ಲಿ ಶಂಕಿತ ಭಯೋತ್ಪಾದಕರು ಶುಕ್ರವಾರ ಸೇನಾ ವಾಹನಗಳ ಮೇಲೆ ದಾಳಿ ನಡೆಸಿದ್ದಾರೆ. ಇದಕ್ಕೆ ಯೋಧರು ಪ್ರತಿ ದಾಳಿ ನಡೆಸಿದ್ದಾರೆ.

ಗುಂಡಿನ ಚಕಮಕಿ ನಡೆದ ಬಳಿಕ ಶಂಕಿತ ಭಯೋತ್ಪಾದಕರು ಪರಾರಿಯಾಗಿರುವ ಸಾಧ್ಯತೆ ಇದೆ. ಸೇನೆ ಶೋಧ ಕಾರ್ಯಾಚರಣೆ ನಡೆಸುತ್ತಿದೆ ಎಂದು ಸೇನೆಯ ಮೂಲಗಳು ತಿಳಿಸಿವೆ.

ಪೂಂಛ್ ವಲಯದ ಕೃಷ್ಣ ಘಾಟಿ ಸಮೀಪದ ಅರಣ್ಯದಿಂದ ಶಂಕಿತ ಭಯೋತ್ಪಾದಕರು ಶುಕ್ರವಾರ ಸಂಜೆ 6 ಗಂಟೆಗೆ ಭದ್ರತಾ ಪಡೆಯ ಬೆಂಗಾವಲು ವಾಹನ ವ್ಯೆಹದ ಮೇಲೆ ಗುಂಡಿನ ದಾಳಿ ನಡೆಸಿದರು. ಯಾರಿಗೂ ಗಾಯಗಳಾಗಿಲ್ಲ. ಜಮ್ಮು ಹಾಗೂ ಕಾಶ್ಮೀರ ಪೊಲೀಸ್ ಹಾಗೂ ಭಾರತೀಯ ಸೇನಾ ಪಡೆ ಶೋಧ ಕಾರ್ಯಾಚರಣೆ ಮುಂದುವರಿಸಿದೆ ಎಂದು ಸೇನೆ ಹೇಳಿದೆ.

ಆಗಾಗ ನಡೆಯುತ್ತಿರುವ ಭಯೋತ್ಪಾದಕ ದಾಳಿಯನ್ನು ನಿಗ್ರಹಿಸುವ ತಂತ್ರ ರೂಪಿಸಲು ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ ಸೇರಿದಂತೆ ಸೇನಾ ಪಡೆಯ ಉನ್ನತ ಅಧಿಕಾರಿಗಳು ಪೂಂಛ್ ನಲ್ಲಿ ಇದ್ದ ಸಂದರ್ಭ ಈ ಭಯೋತ್ಪಾದಕ ದಾಳಿ ನಡೆದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News