×
Ad

ಜಮ್ಮು-ಕಾಶ್ಮೀರ: ಭಯೋತ್ಪಾದಕರೊಂದಿಗೆ ಗುಂಡಿನ ಕಾಳಗದಲ್ಲಿ ಯೋಧನಿಗೆ ಗಾಯ

Update: 2023-06-24 21:23 IST

ಸಾಂದರ್ಭಿಕ ಚಿತ್ರ|  Photo : PTI 

ಜಮ್ಮು: ಜಮ್ಮು-ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ ನಿಯಂತ್ರಣ ರೇಖೆಯನ್ನು ದಾಟಲು ಯತ್ನಿಸುತ್ತಿದ್ದ ಭಯೋತ್ಪಾದಕರೊಂದಿಗೆ ಗುಂಡಿನ ಕಾಳಗದಲ್ಲಿ ಭಾರತೀಯ ಸೇನೆಯ ಓರ್ವ ಯೋಧ ಗಾಯಗೊಂಡಿರುವುದಾಗಿ ಅಧಿಕಾರಿಗಳು ಶನಿವಾರ ತಿಳಿಸಿದರು.

ಶುಕ್ರವಾರ ತಡರಾತ್ರಿ ಗುಲ್ಪುರ್ ವಿಭಾಗದ ಮುಂಚೂಣಿಯ ರೇಂಜರ್ ನಾಲಾ ಪ್ರದೇಶದಲ್ಲಿ ಕನಿಷ್ಠ ಮೂವರು ಭಾರೀ ಶಸ್ತ್ರಸಜ್ಜಿತ ಭಯೋತ್ಪಾದಕರು ದಟ್ಟ ಪೊದೆಗಳು ಮತ್ತು ಕತ್ತಲೆಯ ಮರೆಯಲ್ಲಿ ಭಾರತದೊಳಗೆ ನುಸುಳಲು ಪ್ರಯತ್ನಿಸುತ್ತಿದ್ದನ್ನು ಭಾರತೀಯ ಯೋಧರು ಗಮನಿಸಿದ್ದರು. ಈ ವೇಳೆ ಉಭಯ ಕಡೆಗಳಿಂದ ಗುಂಡುಗಳ ಹಾರಾಟ ನಡೆದಿದ್ದು,ಓರ್ವ ಯೋಧ ಗಾಯಗೊಂಡಿದ್ದಾನೆ. ಭಯೋತ್ಪಾದಕರು ಸಮೀಪದ ದಟ್ಟ ಅರಣ್ಯದಲ್ಲಿ ಪರಾರಿಯಾಗುವಲ್ಲಿ ಸಫಲರಾಗಿದ್ದಾರೆ.

ಪ್ರದೇಶಕ್ಕೆ ಹೆಚ್ಚುವರಿ ಪಡೆಗಳು ಧಾವಿಸಿದ್ದು, ಭಯೋತ್ಪಾದಕರ ಪತ್ತೆಗಾಗಿ ಬೃಹತ್ ಶೋಧ ಕಾರ್ಯಾಚರಣೆಯನ್ನು ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News