×
Ad

ಜಮ್ಮು-ಕಾಶ್ಮೀರ: ಭಯೋತ್ಪಾದಕರೊಂದಿಗೆ ಗುಂಡಿನ ಕಾಳಗದಲ್ಲಿ ಯೋಧ ಮೃತ್ಯು

Update: 2024-07-06 21:18 IST

ಸಾಂದರ್ಭಿಕ ಚಿತ್ರ

ಶ್ರೀನಗರ: ಜಮ್ಮು-ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಶನಿವಾರ ಭಯೋತ್ಪಾದಕರೊಂದಿಗೆ ಗುಂಡಿನ ಕಾಳಗದಲ್ಲಿ ಯೋಧನೋರ್ವ ಮೃತಪಟ್ಟಿದ್ದಾನೆ.

ಭದ್ರತಾ ಪಡೆಗಳು ಮೊಡೇರಗಾಮ್ ಗ್ರಾಮದಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾಗ ಅವರತ್ತ ಭಯೋತ್ಪಾದಕರು ಗುಂಡುಗಳನ್ನು ಹಾರಿಸಿದ್ದರು. ನಂತರ ಸಂಭವಿಸಿದ ಗುಂಡಿನ ಚಕಮಕಿಯಲ್ಲಿ ಭಾರತೀಯ ಸೇನೆಯ ಯೋಧನೋರ್ವ ತೀವ್ರವಾಗಿ ಗಾಯಗೊಂಡು ಮೃತಪಟ್ಟಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದರು.

ಭಯೋತ್ಪಾದಕರಿಗಾಗಿ ಶೋಧ ಕಾರ್ಯಾಚರಣೆ ಮಂದುವರಿದಿದೆ ಎಂದರು.

ಇತ್ತೀಚಿಗೆ ಈ ಪ್ರದೇಶದಲ್ಲಿ ಭಯೋತ್ಪಾದಕ ಚಟುವಟಿಕೆಗಳು ಹೆಚ್ಚುತ್ತಿದ್ದು, ವಿವಿಧ ಜಿಲ್ಲೆಗಳಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಹಲವಾರು ಗುಂಡಿನ ಕಾಳಗಗಳು ನಡೆದಿವೆ.

ಕಳೆದ ತಿಂಗಳು ದೋಡಾ ಜಿಲ್ಲೆಯ ಗಂದೋಹ್ ಪ್ರದೇಶದಲ್ಲಿ ಮೂವರು ಭಯೋತ್ಪಾದಕರು ಭದ್ರತಾ ಪಡೆಗಳ ಗುಂಡುಗಳಿಗೆ ಬಲಿಯಾಗಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News