ಜಾರ್ಖಂಡ್: ಇಬ್ಬರು ಆದಿವಾಸಿ ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರ
Update: 2026-01-27 17:15 IST
ಸಾಂದರ್ಭಿಕ ಚಿತ್ರ | Photo Credit : freepik
ಗಿರಿಧ್ (ಜಾರ್ಖಂಡ್): ಇಬ್ಬರು ಆದಿವಾಸಿ ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಘಟನೆ ಜಾರ್ಖಂಡ್ ರಾಜ್ಯದ ಗಿರಿಧ್ ಜಿಲ್ಲೆಯಲ್ಲಿ ನಡೆದಿದೆ ಎಂದು ಮಂಗಳವಾರ ಪೊಲೀಸರು ತಿಳಿಸಿದ್ದಾರೆ.
ರವಿವಾರ ರಾತ್ರಿ ಪಿರ್ತಂಡ್ ಪೊಲೀಸ್ ಠಾಣೆ ವ್ಯಾಪ್ತಿಯ ಹರ್ಲದಿಹ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಗ್ರಾಮದ ಜಾತ್ರೆ ಮುಗಿಸಿಕೊಂಡು ಇಬ್ಬರು ಬಾಲಕಿಯರು ಮನೆಗೆ ಮರಳುವಾಗ ದುಷ್ಕರ್ಮಿಗಳು ಈ ಕೃತ್ಯವೆಸಗಿದ್ದಾರೆ.
ಬಾಲಕಿಯರನ್ನು ಆರೇಳು ಅಪರಿಚಿತ ದುಷ್ಕರ್ಮಿಗಳು ಅಪಹರಿಸಿದ್ದು, ಅವರನ್ನು ಹತ್ತಿರದ ಹೊಲವೊಂದಕ್ಕೆ ಕರೆದೊಯ್ದು ಅತ್ಯಾಚಾರವೆಸಗಿದ್ದಾರೆ ಎಂದು ಹರ್ಲದಿಹ್ ಹೊರ ಠಾಣೆ ಉಸ್ತುವಾರಿ ದೀಪಕ್ ಕುಮಾರ್ ತಿಳಿಸಿದ್ದಾರೆ.
ಸಂತ್ರಸ್ತ ಬಾಲಕಿಯರ ಹೇಳಿಕೆಗಳನ್ನು ಆಧರಿಸಿ ಎಫ್ಐಆರ್ ದಾಖಲಿಸಿಕೊಳ್ಳಲಾಗಿದ್ದು, ಮುಂದಿನ ತನಿಖೆ ಪ್ರಗತಿಯಲ್ಲಿದೆ ಎಂದು ಅವರು ಹೇಳಿದ್ದಾರೆ.
ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.