×
Ad

ಜಾರ್ಖಂಡ್ ವಿಧಾನಸಭೆ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

Update: 2024-10-22 10:13 IST
PC : PTI

ಹೊಸದಿಲ್ಲಿ: ಜಾರ್ಖಂಡ್ ವಿಧಾನಸಭೆ ಚುನಾವಣೆ ಹಿನ್ನೆಲೆ ಕಾಂಗ್ರೆಸ್ 21 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಪರಿಶಿಷ್ಟ ಪಂಗಡಕ್ಕೆ ಮೀಸಲಾದ ಲೋಹರ್ದಗಾ ಕ್ಷೇತ್ರದಲ್ಲಿ ಹಣಕಾಸು ಸಚಿವ ರಾಮೇಶ್ವರ್ ಓರಾನ್ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದ್ದು, ಹಿರಿಯ ಕಾಂಗ್ರೆಸ್ ನಾಯಕ ಅಜೋಯ್ ಕುಮಾರ್ ಅವರು ಜೆಮ್ಶೆಡ್ಪುರ ಪೂರ್ವ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ.

ಎಸ್ಟಿ ಮೀಸಲು ಕ್ಷೇತ್ರ ಮಂದರ್ ನಲ್ಲಿ ಹಾಲಿ ಶಾಸಕಿ ಶಿಪ್ಲಿ ನೇಹಾ ಟಿರ್ಕಿ ಅವರಿಗೆ ಟಿಕೆಟ್ ನೀಡಲಾಗಿದ್ದು, ಅವರು ಕಾಂಗ್ರೆಸ್ ನ ಪ್ರಣಾಳಿಕೆ ಸಮಿತಿಯ ಅಧ್ಯಕ್ಷರು ಕೂಡ ಆಗಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸೇರಿದಂತೆ ಹಲವು ಹಿರಿಯ ನಾಯಕರ ಸಮ್ಮುಖದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಕೇಂದ್ರ ಚುನಾವಣಾ ಸಮಿತಿಯ ಸಭೆಯಲ್ಲಿ 21 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

ಜಾರ್ಖಂಡ್ ಚುನಾವಣೆಯು ನ. 13 ಮತ್ತು ನ. 20 ರಂದು ಎರಡು ಹಂತಗಳಲ್ಲಿ ನಡೆಯಲಿದ್ದು, ನ. 23 ರಂದು ಮತ ಎಣಿಕೆ ನಡೆಯಲಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News