×
Ad

ಜಾರ್ಖಂಡ್| ಜಾನುವಾರು ಕಳ್ಳತನದ ಶಂಕೆಯಲ್ಲಿ ವ್ಯಕ್ತಿಯನ್ನು ಥಳಿಸಿ ಹತ್ಯೆ

Update: 2026-01-08 23:26 IST

ರಾಂಚಿ, ಜ. 8: ಜಾನುವಾರು ಕಳುವುಗೈದ ಶಂಕೆಯಲ್ಲಿ ಅಪರಿಚಿತ ದುಷ್ಕರ್ಮಿಗಳ ಗುಂಪೊಂದು 45 ವರ್ಷದ ವ್ಯಕ್ತಿಯೋರ್ವರನ್ನು ಥಳಿಸಿ ಹತ್ಯೆಗೈದ ಘಟನೆ ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ನಡೆದಿದೆ.

ಪೊಲೀಸ್ ಅಧಿಕಾರಿಗಳು ನೀಡಿದ ಮಾಹಿತಿಯ ಪ್ರಕಾರ, ಈ ಘಟನೆ ಪೋರೈಯಾಹಟ್ ಪೊಲೀಸ್ ಠಾಣಾ ವ್ಯಾಪ್ತಿಯ ಮಟಿಹಾನಿ ಗ್ರಾಮದಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ಪಪ್ಪು ಅನ್ಸಾರಿ ಎಂದು ಗುರುತಿಸಲಾಗಿದೆ. ಇವರು ಪಥರ್‌ಗಾಮಾ ಪೊಲೀಸ್ ಠಾಣಾ ವ್ಯಾಪ್ತಿಯ ರಾಣಿಪುರ ಗ್ರಾಮದ ನಿವಾಸಿ. ಜಾನುವಾರು ಕಳವುಗೈದ ಆರೋಪದಲ್ಲಿ ದುಷ್ಕರ್ಮಿಗಳ ಗುಂಪೊಂದು ಅವರನ್ನು ಥಳಿಸಿ ಹತ್ಯೆಗೈದಿತು ಎಂದು ಹೇಳಿದ್ದಾರೆ.

ಘಟನೆಯನ್ನು ದೃಢಪಡಿಸಿರುವ ಡಿಎಸ್‌ಪಿ ಜೆ.ಪಿ.ಎನ್. ಚೌಧುರಿ, ಘಟನೆ ಹೇಗೆ ನಡೆಯಿತು ಹಾಗೂ ಕೃತ್ಯದಲ್ಲಿ ಭಾಗಿಯಾಗಿರುವ ವ್ಯಕ್ತಿಗಳು ಯಾರು ಎಂಬುದನ್ನು ಕಂಡು ಹಿಡಿಯಲು ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ತನಿಖೆಯ ಬಳಿಕ ಹೆಚ್ಚಿನ ಮಾಹಿತಿ ನೀಡಲಾಗುವುದು ಎಂದು ಚೌಧರಿ ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News