ಎಬಿವಿಪಿ ರ‍್ಯಾಲಿಗೆ ವಿದ್ಯಾರ್ಥಿಗಳನ್ನು ಕಳುಹಿಸುವಂತೆ ಶಿಕ್ಷಣ ಇಲಾಖೆಗೆ ಆದೇಶಿಸಿದ್ದ ಜಮ್ಮು-ಕಾಶ್ಮೀರ ಸರಕಾರ
Update: 2025-01-25 11:54 IST
Photo credit: thewire.in
ಶ್ರೀನಗರ: ಜಮ್ಮು ಹಾಗೂ ಕಾಶ್ಮೀರದ ಪೂಂಛ್‌ನಲ್ಲಿ ಗುರುವಾರ ನಡೆದ ಎಬಿವಿಪಿಯ ‘ತಿರಂಗಾ’ ರ‍್ಯಾಲಿಯಲ್ಲಿ ಹಲವು ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಭಾಗವಹಿಸಿದ್ದಾರೆ.
ಈ ವಿಷಯ ಜಮ್ಮು ಹಾಗೂ ಕಾಶ್ಮೀರದಲ್ಲಿ ಹೊಸ ವಿವಾದಕ್ಕೆ ಕಾರಣವಾಗಿದೆ.
ರ‍್ಯಾಲಿಯ ಒಂದು ದಿನಕ್ಕಿಂತ ಮುನ್ನ ಜಮ್ಮು ಹಾಗೂ ಕಾಶ್ಮೀರ ಆಡಳಿತ ರ‍್ಯಾಲಿಯಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಪಾಲ್ಗೊಳ್ಳುವಂತೆ ಪೂಂಛ್ ಜಿಲ್ಲೆಯ ಶಿಕ್ಷಣ ಇಲಾಖೆಗೆ ಆದೇಶಿಸಿತ್ತು ಎಂದು ಹೇಳಲಾಗಿದೆ.
ಜಮ್ಮು ಹಾಗೂ ಕಾಶ್ಮೀರದ ನ್ಯಾಷನಲ್ ಕಾನ್ಫರೆನ್ಸ್ ಸರಕಾರ ಎಬಿವಿಪಿಯ ಸೈದ್ಧಾಂತಿಕ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳುವಂತೆ ಬಲವಂತಪಡಿಸಿದೆ ಎಂದು ಪಿಡಿಪಿ ಆರೋಪಿಸಿದೆ.
ಈ ರ‍್ಯಾಲಿಯ ಕುರಿತು ತನಿಖೆ ನಡೆಸುವಂತೆ ಪೂಂಛ್ ಜಿಲ್ಲೆಯ ಪ್ರಮುಖ ಬುಡಕಟ್ಟು ಸಂಘಟನೆ ಕೂಡ ಆಗ್ರಹಿಸಿದೆ.