×
Ad

ಕುಂಭಮೇಳದಿಂದ ಮರಳುತ್ತಿದ್ದಾಗ ಅಪಘಾತ: ಜೆಎಂಎಂ ಸಂಸದೆ ಮಹುವಾ ಮಜಿಗೆ ಗಾಯ

Update: 2025-02-26 13:30 IST

ಜೆಎಂಎಂ ಸಂಸದೆ ಮಹುವಾ ಮಜಿ (Photo credit: NDTV)

ರಾಂಚಿ: ಮಹಾ ಕುಂಭಮೇಳದಿಂದ ಮರಳುತ್ತಿದ್ದಾಗ, ಟ್ರಕ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಜೆಎಂಎಂ ಸಂಸದೆ ಮಹುವಾ ಮಜಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಾರ್ಖಂಡ್ ನ ಲತೇಹರ್ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಂದು ಮುಂಜಾನೆ 2.30ರ ಸುಮಾರಿಗೆ ರಾಷ್ಟ್ರೀಯ ಹೆದ್ದಾರಿ 75ರಲ್ಲಿನ ಹೊಟ್ವಾಗ್ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ರಾಜ್ಯಸಭಾ ಸದಸ್ಯೆಯಾದ ಮಹುವಾ ಮಜಿ ಅವರ ಎಡಗೈ ಮೂಳೆ ಮುರಿದಿದ್ದು, ಅವರನ್ನು ರಾಂಚಿಯ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಪೊಲೀಸ್ ಅಧಿಕಾರಿ ದುಲಾರ್ ಚೌಡೆ, ಅಪಘಾತದಲ್ಲಿ ಮಜಿ ಅವರ ಮಗ ಹಾಗೂ ಸೊಸೆಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಮಜಿ ಅವರನ್ನು ತಕ್ಷಣವೇ ಸದರ್ ಆಸ್ಪತ್ರೆಗೆ ಸಾಗಿಸಲಾಯಿತು. ನಂತರ ಅವರನ್ನು ರಾಂಚಿಯ ರೀಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು ಎಂದು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News