×
Ad

ಮಾಲೆಗಾಂವ್ ಸ್ಫೋಟ ಪ್ರಕರಣದ ವಿಚಾರಣೆ ನಡೆಸುತ್ತಿದ್ದ ನ್ಯಾಯಾಧೀಶರ ವರ್ಗಾವಣೆ

Update: 2025-04-06 12:55 IST

File Photo (Credit: PTI)

ಮುಂಬೈ: 2008ರ ಮಾಲೆಗಾಂವ್ ಸ್ಫೋಟ ಪ್ರಕರಣದ ವಿಚಾರಣೆ ನಡೆಸುತ್ತಿರುವ ವಿಶೇಷ ಎನ್ಐಎ ನ್ಯಾಯಾಲಯದ ನ್ಯಾಯಾಧೀಶ ಎಕೆ ಲಹೋಟಿ ಅವರನ್ನು ನಾಸಿಕ್‌ಗೆ ವರ್ಗಾಯಿಸಲಾಗಿದೆ.

ಬಾಂಬೆ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಲಾಹೋಟಿ ಸೇರಿದಂತೆ ಇತರ ನ್ಯಾಯಾಧೀಶರನ್ನು ವರ್ಗಾಯಿಸಿ ಆದೇಶ ಹೊರಡಿಸಿದ್ದು, ಆದೇಶವು ಜೂನ್ 9ರಿಂದ ಜಾರಿಗೆ ಬರಲಿದೆ.

ಮಾಲೆಗಾಂವ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿ ಶನಿವಾರದ ವಿಚಾರಣೆಯ ವೇಳೆ ನ್ಯಾಯಮೂರ್ತಿ ಲಾಹೋಟಿ ಅವರು ಉಳಿದ ವಾದಗಳನ್ನು ಏಪ್ರಿಲ್ 15ರೊಳಗೆ ಮುಕ್ತಾಯಗೊಳಿಸುವಂತೆ ಪ್ರಾಸಿಕ್ಯೂಷನ್‌ಗೆ ನಿರ್ದೇಶಿಸಿದರು. ಮರುದಿನ ತೀರ್ಪಿಗೆ ವಿಷಯವನ್ನು ಕಾಯ್ದಿರಿಸುವ ನಿರೀಕ್ಷೆಯಿದೆ ಎಂದು ಪ್ರತಿವಾದಿ ವಕೀಲರು ಹೇಳಿದರು.

ಉತ್ತರ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ಎಂಬ ಪಟ್ಟಣದ ಮಸೀದಿಯೊಂದರ ಬಳಿ 2008ರ ಸೆಪ್ಟೆಂಬರ್ 29ರಂದು ಸ್ಪೋಟ ಸಂಭವಿಸಿತ್ತು. ಘಟನೆಯಲ್ಲಿ ಆರು ಮಂದಿ ಮೃತಪಟ್ಟು,100ಕ್ಕೂ ಅಧಿಕ ಜನರು ಗಾಯಗೊಂಡಿದ್ದರು.

ಬಿಜೆಪಿ ನಾಯಕಿ ಪ್ರಜ್ಞಾ ಠಾಕೂರ್, ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಪುರೋಹಿತ್ ಮತ್ತು ಇತರ ಐವರು ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿದ್ದಾರೆ. ಆರೋಪಿಗಳ ವಿರುದ್ಧ ಕಠಿಣ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ(UAPA) ಮತ್ತು ಭಾರತೀಯ ದಂಡ ಸಂಹಿತೆ (IPC)ಯ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News