×
Ad

VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ

Update: 2024-12-15 16:46 IST

ನ್ಯಾ. ಶೇಖರ್ ಯಾದವ್ (Photo: X/@barandbench)

ಹೊಸದಿಲ್ಲಿ: ಅಲಹಾಬಾದ್ ಹೈಕೋರ್ಟ್ ನ ಹಾಲಿ ನ್ಯಾಯಮೂರ್ತಿ ಶೇಖರ್ ಕುಮಾರ್ ಯಾದವ್ ವಿಎಚ್‌ಪಿ ಕಾರ್ಯಕ್ರಮದಲ್ಲಿ ನೀಡಿದ್ದ ವಿವಾದಾತ್ಮಕ ಹೇಳಿಕೆ ಬಗ್ಗೆ ವಿವರಣೆಯನ್ನು ನೀಡಲು ಮತ್ತು ತಮ್ಮ ನಿಲುವನ್ನು ಸ್ಪಷ್ಟಪಡಿಸಲು ಶೀಘ್ರದಲ್ಲೇ ಸುಪ್ರೀಂ ಕೋರ್ಟ್ ಕೊಲಿಜಿಯಂ ಮುಂದೆ ಹಾಜರಾಗುವ ಸಾಧ್ಯತೆಯಿದೆ.

ವಿಎಚ್‌ಪಿ ಕಾರ್ಯಕ್ರಮದಲ್ಲಿ ಏಕರೂಪ ನಾಗರಿಕ ಸಂಹಿತೆ ಬಗ್ಗೆ ಮಾತನಾಡಿದ ನ್ಯಾಯಮೂರ್ತಿ ಶೇಖರ್ ಕುಮಾರ್ ಯಾದವ್, ಭಾರತ ದೇಶವು ತನ್ನ ಬಹುಸಂಖ್ಯಾತ ಜನರ ಇಚ್ಛೆಯಂತೆ ನಡೆಯುತ್ತದೆ’, ಏಕರೂಪ ನಾಗರಿಕ ಸಂಹಿತೆಯ ಜಾರಿ ಸಾಂವಿಧಾನಿಕ ಅಗತ್ಯವಾಗಿದೆ ಎಂದು ಪ್ರತಿಪಾದಿಸಿದ್ದರು. ನ್ಯಾಯಾಧೀಶರು ತನ್ನ ಭಾಷಣದಲ್ಲಿ ʼಮತಾಂಧರುʼ ಎಂಬ ಪದವನ್ನು ಬಳಸಿದ್ದಾರೆ. ನ್ಯಾಯಮೂರ್ತಿ ಶೇಖರ್ ಕುಮಾರ್ ಯಾದವ್ ತನ್ನ ಭಾಷಣದಲ್ಲಿ ಮುಸ್ಲಿಂ ಸಮುದಾಯದ ಪ್ರಾಣಿ ಬಲಿ ಕೊಡುವುದು ಸೇರಿದಂತೆ ಕೆಲವು ಆಚರಣೆಗಳನ್ನು ಟೀಕಿಸಿದ್ದಾರೆ. ಈ ಕುರಿತು ಕ್ಯಾಂಪೇನ್ ಫಾರ್ ಜುಡಿಷಿಯಲ್ ಅಕೌಂಟೆಬಿಲಿಟಿ ಅಂಡ್ ರಿಫಾರ್ಮ್ಸ್ (CJAR) ಸಂಸ್ಥೆ ಭಾರತದ ಮುಖ್ಯ ನ್ಯಾಯಾಧೀಶರಿಗೆ ದೂರುಗಳನ್ನು ಸಲ್ಲಿಸಿ ನ್ಯಾಯಾಧೀಶರ ಹೇಳಿಕೆ ಬಗ್ಗೆ ಆಂತರಿಕ ತನಿಖೆಗೆ ಒತ್ತಾಯಿಸಿತ್ತು.

ಶೇಖರ್ ಕುಮಾರ್ ಯಾದವ್ ಅವರ ಹೇಳಿಕೆ ಕುರಿತ ವರದಿಗಳನ್ನು ಗಮನಿಸಿ ಡಿಸೆಂಬರ್ 10ರಂದು ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್‌ ನಿಂದ ವರದಿಯನ್ನು ಕೂಡ ಕೇಳಿತ್ತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News