×
Ad

ಮನೆಯಲ್ಲಿ ನಗದು ಪತ್ತೆ ಪ್ರಕರಣ : ತನಿಖಾ ತಂಡದ ವರದಿ ವಿರುದ್ಧ ಸುಪ್ರೀಂ ಮೊರೆ ಹೋದ ನ್ಯಾಯಮೂರ್ತಿ ವರ್ಮಾ

Update: 2025-07-18 07:43 IST

ಯಶವಂತ ವರ್ಮಾ | PC : PTI

ಹೊಸದಿಲ್ಲಿ: ಕಳೆದ ಮಾರ್ಚ್ ನಲ್ಲಿ ಸಂಭವಿಸಿದ ಅಗ್ನಿ ಅನಾಹುತ ಸಂದರ್ಭ ಅಧಿಕೃತ ನಿವಾಸದಲ್ಲಿ ನೋಟಿನ ಕಂತೆಗಳು ಪತ್ತೆಯಾದ ಘಟನೆ ಬಳಿಕ ವಿವಾದದ ಕೇಂದ್ರ ಬಿಂದುವಾಗಿರುವ ನ್ಯಾಯಮೂರ್ತಿ ಯಶವಂತ ವರ್ಮಾ ಗುರುವಾರ ವಿಶೇಷ ತನಿಖಾ ತಂಡದ ವರದಿ ವಿರುದ್ಧ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ.

ಸುಪ್ರೀಂಕೋರ್ಟ್ ನೇಮಕ ಮಾಡಿದ್ದ ನ್ಯಾಯಮೂರ್ತಿಗಳ ತನಿಖಾ ತಂಡ ನೀಡಿದ್ದ ವರದಿಯನ್ನು ಅಮಾನ್ಯ ಮಾಡುವಂತೆ ಕೋರಿ ನ್ಯಾಯಮೂರ್ತಿ ವರ್ಮಾ ಅರ್ಜಿ ಸಲ್ಲಿಸಿದ್ದಾರೆ. ಅಧಿಕೃತ ನಿವಾಸದಲ್ಲಿ ಪತ್ತೆಯಾದ ನಗದಿನ ವಿಚಾರದಲ್ಲಿ ನ್ಯಾಯಮೂರ್ತಿ ವರ್ಮಾ ರಹಸ್ಯ ಅಥವಾ ಸಕ್ರಿಯ ನಿಯಂತ್ರಣ ಹೊಂದಿದ್ದಕ್ಕೆ ಪ್ರಬಲವಾದ ಪುರಾವೆ ಇದೆ ಎಂದು ತನಿಖಾ ವರದಿಯಲ್ಲಿ ಹೇಳಲಾಗಿತ್ತು.

ನ್ಯಾಯಮೂರ್ತಿ ವರ್ಮಾ ವಿರುದ್ಧದ ವಾಗ್ದಂಡನೆಗೆ ಭಾರತದ ಮುಖ್ಯ ನ್ಯಾಯಮೂರ್ತಿಯಾಗಿದ್ದ ಸಂಜೀವ್ ಖನ್ನಾ ಮಾಡಿದ್ದ ಶಿಫಾರಸ್ಸು ರದ್ದುಪಡಿಸುವಂತೆಯೂ ರಿಟ್ ಅರ್ಜಿಯಲ್ಲಿ ಮನವಿ ಮಾಡಲಾಗಿದೆ. ಸಂವಿಧಾನಾತ್ಮಕ ಹುದ್ದೆಯ ಹಾಗೂ ವೈಕ್ತಿಯ ಹಕ್ಕುಗಳಿಗೆ ವಿರುದ್ಧವಾಗಿ ತೀರಾ ಒರಟಾಗಿ ಸಿದ್ಧಪಡಿಸಿದ ಆಧಾರ ರಹಿತ ವರದಿ ಇದಾಗಿದೆ ಎಂದು ನ್ಯಾಯಮೂರ್ತಿ ಪ್ರತಿಪಾದಿಸಿದ್ದಾರೆ.

ನ್ಯಾಯಮೂರ್ತಿ ವರ್ಮಾ ವಿರುದ್ಧ ವಾಗ್ದಂಡನೆ ಪ್ರಕ್ರಿಯೆಯನ್ನು ಸರ್ಕಾರ ಮುಂದಿನ ಮುಂಗಾರು ಅಧಿವೇಶನದಲ್ಲಿ ಆರಂಭಿಸಲಿದ್ದು, ಅಧಿವೇಶನ ಆರಂಭಕ್ಕೆ ಮುನ್ನ ಈ ಅರ್ಜಿ ಸಲ್ಲಿಕೆಯಾಗಿದೆ.

ಸುಪ್ರೀಂಕೋರ್ಟ್ ನೇಮಕ ಮಾಡಿದ್ದ ಮೂವರು ನ್ಯಾಯಮೂರ್ತಿಗಳ ತಂಡ ಸಂಪೂರ್ಣ ಹಾಗೂ ನ್ಯಾಯಸಮ್ಮತ ವಿಚಾರಣೆ ನಡೆಸದೇ ಪ್ರತಿಕೂಲ ವರದಿ ನೀಡಿದೆ ಎನ್ನುವುದು ನ್ಯಾಯಮೂರ್ತಿ ವರ್ಮಾ ಅವರ ವಾದ ಎಂದು ಘಟನಾವಳಿಗಳ ಬಗ್ಗೆ ಮಾಹಿತಿ ಇರುವ ಮೂಲಗಳು ಹೇಳಿವೆ.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News