ವಿಧಾನಸಭಾ ಉಪಚುನಾವಣೆ | ಕಾಲಿಗಂಜ್‌ನಲ್ಲಿ ಟಿಎಂಸಿ ಅಭ್ಯರ್ಥಿ ಅಲಿಫಾ ಅಹ್ಮದ್‌ಗೆ ಮುನ್ನಡೆ
Update: 2025-06-23 11:31 IST
ಸಾಂದರ್ಭಿಕ ಚಿತ್ರ (PTI)
ಅಹ್ಮದಾಬಾದ್ : ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಮುಂದುವರಿದಿದೆ. ಪಶ್ಚಿಮ ಬಂಗಾಳದ ಕಾಲಿಗಂಜ್ ಕ್ಷೇತ್ರದಲ್ಲಿ ಟಿಎಂಸಿ ಅಭ್ಯರ್ಥಿ ಅಲಿಫಾ ಅಹ್ಮದ್ ಮುನ್ನಡೆ ಸಾಧಿಸಿದ್ದಾರೆ.
ಅಲಿಫಾ ಅಹ್ಮದ್ ಬಿಜೆಪಿ ಅಭ್ಯರ್ಥಿ ಆಶಿಶ್ ಘೋಷ್ ವಿರುದ್ಧ 16,000ಕ್ಕೂ ಅಧಿಕ ಮತಗಳ ಅಂತರದ ಮುನ್ನಡೆಯನ್ನು ಸಾಧಿಸಿದ್ದಾರೆ.