×
Ad

ಟ್ರಂಪ್ ಕುರಿತ ಪೋಸ್ಟ್ ಅನ್ನು ಅಳಿಸಿ ಹಾಕಿದ ಕಂಗನಾ ರಣಾವತ್

Update: 2025-05-15 22:21 IST

 ಕಂಗನಾ ರಣಾವತ್ | PC : PTI 

ಹೊಸದಿಲ್ಲಿ: ಅಮೆರಿಕ ಅಧ್ಯ ಕ್ಷ ಡೊನಾಲ್ಡ್ ಟ್ರಂಪ್ ಕುರಿತು ತಾವು ಮಾಡಿದ್ದ ಪೋಸ್ಟ್ ಅನ್ನು ಗುರುವಾರ ಅಳಿಸಿ ಹಾಕಿರುವ ನಟಿ ಮತ್ತು ಬಿಜೆಪಿ ಸಂಸದೆ ಕಂಗನಾ ರಣಾವತ್, ಸಾಮಾಜಿಕ ಮಾಧ್ಯಮದಲ್ಲಿ ತೀರಾ ವೈಯಕ್ತಿಕ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ವಿಷಾದಿಸಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾರಿಂದ ದೂರವಾಣಿ ಕರೆ ಸ್ವೀಕರಿಸಿದ ನಂತರ, ನಾನು ಈ ಪೋಸ್ಟ್ ಅನ್ನು ಅಳಿಸಿ ಹಾಕಿದ್ದೇನೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಕಂಗನಾ ರಣಾವತ್, “ಭಾರತದಲ್ಲಿ ಉತ್ಪಾದನೆ ಮಾಡಬೇಡಿ ಎಂದು ಆ್ಯಪಲ್ ಸಿಇಒ ಟಿಮ್ ಕುಕ್ ಗೆ ಸೂಚಿಸಿರುವ ಡೊನಾಲ್ಡ್ ಟ್ರಂಪ್ ಕುರಿತಂತೆ ನಾನು ಮಾಡಿದ್ದ ಪೋಸ್ಟ್ ಅನ್ನು ಅಳಿಸಿ ಹಾಕುವಂತೆ ಗೌರವಾನ್ವಿತ ರಾಷ್ಟ್ರೀಯ ಅಧ್ಯಿಕ್ಷ ಜೆ.ಪಿ.ನಡ್ಡಾ ಸೂಚಿಸಿದ ನಂತರ, ನಾನು ಆ ಪೋಸ್ಟ್ ಅನ್ನು ಅಳಿಸಿ ಹಾಕಿದ್ದೇನೆ” ಎಂದು ಬರೆದುಕೊಂಡಿದ್ದಾರೆ.

“ನಾನು ನನ್ನ ತೀರಾ ವೈಯಕ್ತಿಕ ಅಭಿಪ್ರಾಯವನ್ನು ಪೋಸ್ಟ್ ಮಾಡಿದ್ದಕ್ಕೆ ವಿಷಾದಿಸುತ್ತೇನೆ. ನನಗೆ ನೀಡಿದ ನಿರ್ದೇಶನದನ್ವಯ, ತಕ್ಷಣವೇ ಆ ಪೋಸ್ಟ್ ಅನ್ನು ಇನ್ಸ್ಟಾಗ್ರಾಮ್ ನಿಂದ ಅಳಿಸಿ ಹಾಕಿದ್ದೇನೆ” ಎಂದೂ ಅವರು ಹೇಳಿದ್ದಾರೆ.

ಇದಕ್ಕೂ ಮುನ್ನ, ಗಲ್ಫ್ ಪ್ರಾಂತ್ಯಕ್ಕೆ ತಮ್ಮ ನಾಲ್ಕು ದಿನಗಳ ಪ್ರವಾಸದ ಭಾಗವಾಗಿ ಗುರುವಾರ ಖತರ್ ಗೆ ಆಗಮಿಸಿದ ಡೊನಾಲ್ಡ್ ಟ್ರಂಪ್, ಭಾರತದಲ್ಲಿ ನೀವು ಐಫೋನ್ ತಯಾರಿಸುವುದನ್ನು ನಾನು ಇಷ್ಟಪಡುವುದಿಲ್ಲ ಎಂದು ನಾನು ಆ್ಯಪಲ್ ಸಿಇಒ ಟಿಮ್ ಕುಕ್ ಗೆ ಹೇಳಿದ್ದೆ ಎಂದು ಹೇಳಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News