×
Ad

ಜೆಎನ್‌ಯು ವಿದ್ಯಾರ್ಥಿ ಯೂನಿಯನ್‌ ಮಾಜಿ ಅಧ್ಯಕ್ಷ ಕನ್ಹಯ್ಯ ಕುಮಾರ್‌ ಅವರನ್ನು ದಿಲ್ಲಿಯಿಂದ ಕಣಕ್ಕಿಳಿಸಲು ಕಾಂಗ್ರೆಸ್‌ ಚಿಂತನೆ

Update: 2024-04-12 15:33 IST

ಕನ್ಹಯ್ಯ ಕುಮಾರ್‌ (Photo: PTI) 

ಹೊಸದಿಲ್ಲಿ: ಜೆಎನ್‌ಯು ವಿದ್ಯಾರ್ಥಿ ಯೂನಿಯನ್‌ನ ಮಾಜಿ ಅಧ್ಯಕ್ಷ ಕನ್ಹಯ್ಯ ಕುಮಾರ್‌ ಅವರನ್ನು ದಿಲ್ಲಿಯ ಒಂದು ಕ್ಷೇತ್ರದಿಂದ ಕಣಕ್ಕಿಳಿಸಲು ಕಾಂಗ್ರೆಸ್‌ ಚಿಂತನೆ ನಡೆಸಿದೆ ಎಂದು ತಿಳಿದು ಬಂದಿದೆ.

ತನ್ನ ಇಂಡಿಯಾ ಮೈತ್ರಿಕೂಟದ ಮಿತ್ರ ಪಕ್ಷ ಆಪ್‌ನೊಂದಿಗಿನ ಸೀಟು ಹೊಂದಾಣಿಕೆಯಂತೆ ಕಾಂಗ್ರೆಸ್‌ ದಿಲ್ಲಿಯ ಮೂರು ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ. ಆದ್ದರಿಂದ ಈ ಕ್ಷೇತ್ರಗಳಲ್ಲಿ ಒಂದರಲ್ಲಿ ಕನ್ಹಯ್ಯ ಅವರನ್ನು ಕಣಕ್ಕಿಳಿಸಲು ಬುಧವಾರ ಪಕ್ಷದ ಹಿರಿಯ ನಾಯಕರು ನಡೆಸಿದ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು indianexpress.com ವರದಿ ಮಾಡಿದೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಹಾರದ ಬೇಗುಸರೈ ಕ್ಷೇತ್ರದಿಂದ ಕನ್ಹಯ್ಯ ಅವರು ಸಿಪಿಐ ಅಭ್ಯರ್ಥಿಯಾಗಿ ಕೇಂದ್ರ ಸಚಿವ ಗಿರಿರಾಜ್‌ ಸಿಂಗ್‌ ಅವರೆದುರು ಸ್ಪರ್ಧಿಸಿ ಸೋತಿದ್ದರು.

ಪ್ರಸ್ತುತ ಕನ್ಹಯ್ಯ ಅವರು ಎನ್‌ಎಸ್‌ಯುಐ ಉಸ್ತುವಾರಿಯಾಗಿದ್ದಾರೆ.

ಕನ್ಹಯ್ಯ ಅವರನ್ನು ಯಾವ ಕ್ಷೇತ್ರದಿಂದ ಕಣಕ್ಕಿಳಿಸಬೇಕೆಂಬ ಬಗ್ಗೆ ಅಂತಿಮ ನಿರ್ಧಾರವನ್ನು ಶನಿವಾರ ನಡೆಯಲಿರುವ ಕಾಂಗ್ರೆಸ್‌ನ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಕೈಗೊಳ್ಳುವ ನಿರೀಕ್ಷೆಯಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News