ಕರೂರು ಕಾಲ್ತುಳಿತ ಪ್ರಕರಣ : ಮೃತರ ಕುಟುಂಬಗಳಿಗೆ ತಲಾ ಎರಡು ಲಕ್ಷ ರೂ.ಪರಿಹಾರ ಘೋಷಿಸಿದ ಪ್ರಧಾನಿ ಮೋದಿ
ನರೇಂದ್ರ ಮೋದಿ | PTI
ಹೊಸದಿಲ್ಲಿ,ಸೆ.28: ತಮಿಳುನಾಡಿನ ಕರೂರಿನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟಿರುವ 39 ಜನರ ಕುಟುಂಬಗಳಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ ಎರಡು ಲ.ರೂ.ಪರಿಹಾರವನ್ನು ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿಯವರು ರವಿವಾರ ಘೋಷಿಸಿದ್ದಾರೆ.
ಈ ದುರಂತ ಘಟನೆಯಲ್ಲಿ ಗಾಯಗೊಂಡವರಿಗೆ ತಲಾ 50,000 ರೂ.ಗಳ ಪರಿಹಾರವನ್ನೂ ಮೋದಿ ಘೋಷಿಸಿದ್ದಾರೆ.
ಪ್ರಧಾನಿ ಕಚೇರಿಯು ಈ ಮಾಹಿತಿಯನ್ನು ಎಕ್ಸ್ ಪೋಸ್ಟ್‌ನಲ್ಲಿ ಹಂಚಿಕೊಂಡಿದೆ.
ಕರೂರಿನಲ್ಲಿ ಟಿವಿಕೆ ಮುಖ್ಯಸ್ಥ ಹಾಗೂ ನಟ ವಿಜಯ ಅವರ ಸಾರ್ವಜನಿಕ ರ್ಯಾಲಿಯಲ್ಲಿ ಸಂಭವಿಸಿದ್ದ ಕಾಲ್ತುಳಿತದಲ್ಲಿ ಸಾವುಗಳಿಗಾಗಿ ಶನಿವಾರ ರಾತ್ರಿ ಸಂತಾಪ ವ್ಯಕ್ತಪಡಿಸಿದ್ದ ಮೋದಿ, ಗಾಯಾಳುಗಳ ಶೀಘ್ರ ಚೇತರಿಕೆಗೆ ಹಾರೈಸಿದ್ದರು.
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಈಗಾಗಲೇ ಮೃತರ ಕುಟುಂಬಗಳಿಗೆ ತಲಾ 10 ಲ.ರೂ. ಮತ್ತು ಗಾಯಾಳುಗಳಿಗೆ ಒಂದು ಲ.ರೂ.ಪರಿಹಾರವನ್ನು ಘೋಷಿಸಿದ್ದು, ಕಾಲ್ತುಳಿತ ಘಟನೆಯ ಕುರಿತು ತನಿಖೆಗೆ ಆದೇಶಿಸಿದ್ದಾರೆ.