ಕರೂರು ಕಾಲ್ತುಳಿತ ಪ್ರಕರಣ : ಸಿಬಿಐ ತನಿಖೆ ಕೋರಿದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿ
Update: 2025-10-07 21:03 IST
Photo Credit : PTI
ಹೊಸದಿಲ್ಲಿ, ಅ. 7: ಕರೂರ್‌ನಲ್ಲಿ ಸಂಭವಿಸಿದ ಕಾಲ್ತುಳಿತದ ಘಟನೆ ಕುರಿತು ಸಿಬಿಐ ತನಿಖೆಗೆ ನಿರಾಕರಿಸಿ ಮದ್ರಾಸ್ ಉಚ್ಚ ನ್ಯಾಯಾಲಯ ನೀಡಿದ ಆದೇಶ ಪ್ರಶ್ನಿಸಿ ಸಲ್ಲಿಸಿದ ಮೇಲ್ಮನವಿಯನ್ನು ಅಕ್ಟೋಬರ್ 10ರಂದು ಆಲಿಸಲು ಸುಪ್ರೀಂ ಕೋರ್ಟ್ ಮಂಗಳವಾರ ಒಪ್ಪಿಕೊಂಡಿದೆ.
ಕಾಲ್ತುಳಿತದ ಕುರಿತು ಸಿಬಿಐ ತನಿಖೆ ಕೋರಿ ಬಿಜಪಿ ನಾಯಕಿ ಉಮಾ ಆನಂದನ್ ಸಲ್ಲಿಸಿದ ಮೇಲ್ಮನವಿಯನ್ನು ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಹಾಗೂ ನ್ಯಾಯಮೂರ್ತಿ ಕೆ. ವಿನೋದ್ ಚಂದ್ರನ್ ಅವರ ಪೀಠ ಪರಿಗಣಿಸಿತು.
‘‘ಸಿಬಿಐ ತನಿಖೆಗೆ ಕೋರಿದ ಅರ್ಜಿಯನ್ನು ಉಚ್ಚ ನ್ಯಾಯಾಲಯದ ನ್ಯಾಯಾಧೀಶರು ನಿರಾಕರಿಸಿದ್ದಾರೆ. ಆದರೆ, ಕಾಲ್ತುಳಿತದ ಕುರಿತು ನಡೆಸಿದ ತನಿಖೆ ತೃಪ್ತಿಕರವಾಗಿಲ್ಲವೆಂದು ಅವರು ಅಭಿಪ್ರಾಯಿಸಿದ್ದಾರೆ’’ ಎಂದು ವಕೀಲರು ಪೀಠಕ್ಕೆ ತಿಳಿಸಿದರು.
ಈ ಅರ್ಜಿಯನ್ನು ಶುಕ್ರವಾರ ವಿಚಾರಣೆಗೆ ಪಟ್ಟಿ ಮಾಡಲಾಗಿದೆ ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದರು.