ತೆಲಂಗಾಣ: ಪುತ್ರಿ ಕವಿತಾರನ್ನು ಬಿಆರ್‌ಎಸ್ ಪಕ್ಷದಿಂದ ಅಮಾನತುಗೊಳಿಸಿದ ಕೆಸಿಆರ್
Update: 2025-09-02 14:56 IST
ಕೆ. ಕವಿತಾ (Photo credit: PTI)
ಹೈದರಾಬಾದ್ : ತೆಲಂಗಾಣ ಶಾಸಕಿ ಕೆ. ಕವಿತಾ ಅವರನ್ನು ಅವರ ತಂದೆ, ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು ಬಿಆರ್‌ಎಸ್ (ಭಾರತ ರಾಷ್ಟ್ರ ಸಮಿತಿ) ಪಕ್ಷದಿಂದ ಅಮಾನತುಗೊಳಿಸಿದ್ದಾರೆ.
ಪಕ್ಷ ವಿರೋಧಿ ಚಟುವಟಿಕೆಯ ಹಿನ್ನೆಲೆ ಕೆ. ಕವಿತಾ ವಿರುದ್ಧ ಶಿಸ್ತುಕ್ರಮವನ್ನು ಕೈಗೊಳ್ಳಲಾಗಿದೆ ಎಂದು ಕೆ. ಚಂದ್ರಶೇಖರ್ ರಾವ್ ತಿಳಿಸಿದ್ದಾರೆ.
ತೆಲಂಗಾಣ ಕಾಂಗ್ರೆಸ್ ಸರಕಾರ ಕಾಳೇಶ್ವರಂ ಯೋಜನೆಗೆ ಸಂಬಂಧಿಸಿದ ಅಕ್ರಮಗಳ ತನಿಖೆಯನ್ನು ಸಿಬಿಐಗೆ ವಹಿಸಿದ ಒಂದು ದಿನದ ನಂತರ ಈ ಬೆಳವಣಿಗೆ ನಡೆದಿದೆ.
"2014ರಲ್ಲಿ ಬಿಆರ್‌ಎಸ್ ಸರಕಾರ ಅಧಿಕಾರದಲ್ಲಿದ್ದಾಗ ನೀರಾವರಿ ಸಚಿವರಾಗಿದ್ದ ಹರೀಶ್ ರಾವ್ ಅವರು ಅಕ್ರಮವಾಗಿ ಆಸ್ತಿಗಳನ್ನು ಸಂಗ್ರಹಿಸಿದ್ದಾರೆ ಮತ್ತು ಹಾಲಿ ಸಿಎಂ ರೇವಂತ್ ರೆಡ್ಡಿ ಅವರೊಂದಿಗೆ ಕೆಸಿಆರ್ ಅವರ ಪ್ರತಿಷ್ಠೆಯನ್ನು ಹಾಳು ಮಾಡಲು ಒಪ್ಪಂದ ಮಾಡಿಕೊಂಡಿದ್ದಾರೆ" ಎಂದು ಸೋಮವಾರ ಕವಿತಾ ಅವರು ಆರೋಪಿಸಿದ್ದರು.