×
Ad

ಕೇಜ್ರಿವಾಲ್ ಆ. 20ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

Update: 2024-08-08 22:36 IST

 ಅರವಿಂದ್ ಕೇಜ್ರಿವಾಲ್ | PC : PTI 

ಹೊಸದಿಲ್ಲಿ : ದಿಲ್ಲಿ ಅಬಕಾರಿ ನೀತಿ ಕುರಿತ ಸಿಬಿಐ ಪ್ರಕರಣದಲ್ಲಿ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ಇಲ್ಲಿನ ರೌಸ್ ಅವೆನ್ಯೂ ನ್ಯಾಯಾಲಯ ಗುರುವಾರ ಆಗಸ್ಟ್ 20ರ ವರೆಗೆ ವಿಸ್ತರಿಸಿದೆ.

ಅರವಿಂದ್ ಕೇಜ್ರಿವಾಲ್ ಅವರನ್ನು ತಿಹಾರ್ ಕಾರಾಗೃಹದಿಂದ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು.

ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಅರವಿಂದ್ ಕೇಜ್ರಿವಾಲ್ ಅವರು ಸಲ್ಲಿಸಿದ ಅರ್ಜಿಯನ್ನು ದಿಲ್ಲಿ ಉಚ್ಚ ನ್ಯಾಯಾಲಯ ಸೋಮವಾರ ತಿರಸ್ಕರಿಸಿತ್ತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News