×
Ad

ರಾಜ್ಯದಲ್ಲಿ ಎಸ್‌ಐಆರ್ ವಿರುದ್ಧ ಸುಪ್ರೀಂ ಮೆಟ್ಟಿಲೇರಲು ಕೇರಳ ಸಜ್ಜು

Update: 2025-11-06 20:09 IST

 ಸುಪ್ರೀಂ ಕೋರ್ಟ್‌ | Photo Credit : PTI 

ತಿರುವನಂತಪುರ,ನ.6: ರಾಜ್ಯದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ(ಎಸ್‌ಐಆರ್) ವಿರುದ್ಧ ಸರ್ವೋಚ್ಚ ನ್ಯಾಯಾಲಯದ ಮೆಟ್ಟಿಲೇರಲು ಕೇರಳದ ಎಡರಂಗ ಸರಕಾರವು ನಿರ್ಧರಿಸಿದೆ ಎಂದು ಸುದ್ದಿಸಂಸ್ಥೆಯು ವರದಿ ಮಾಡಿದೆ.

ಬುಧವಾರ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಇಲ್ಲಿ ಕರೆದಿದ್ದ ಸರ್ವಪಕ್ಷ ಸಭೆಯ ಬಳಿಕ ಈ ನಿರ್ಧಾರವು ಹೊರಬಿದ್ದಿದೆ. ಬಿಜೆಪಿಯನ್ನು ಹೊರತುಪಡಿಸಿ ಸಭೆಯಲ್ಲಿ ಭಾಗವಹಿಸಿದ್ದ ಎಲ್ಲ ಪಕ್ಷಗಳು ಎಸ್‌ಐಆರ್‌ನ್ನು ಕಾನೂನುಬದ್ಧವಾಗಿ ಪ್ರಶ್ನಿಸುವ ರಾಜ್ಯ ಸರಕಾರದ ನಿರ್ಧಾರವನ್ನು ಬೆಂಬಲಿಸಿವೆ.

ಚುನಾವಣಾ ಆಯೋಗವು ಮಂಗಳವಾರ ಕೇರಳ ಸೇರಿದಂತೆ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಗಳ ಪರಿಷ್ಕರಣೆಯ ಎಣಿಕೆ ಹಂತವನ್ನು ಆರಂಭಿಸಿದೆ.

ವಿಶೇಷವಾಗಿ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಗಣನೆಗೆ ತೆಗೆದುಕೊಂಡು ಕೇರಳ ಸರಕಾರ ಮತ್ತು ಆಡಳಿತಾರೂಢ ಸಿಪಿಎಂ ಎಸ್‌ಐಆರ್ ಪ್ರಶ್ನಿಸುವ ಬಗ್ಗೆ ಕಾನೂನು ಸಲಹೆಯನ್ನು ಪಡೆದುಕೊಳ್ಳಲಿವೆ ಎಂದು ವಿಜಯ್‌ನ್ ಬುಧವಾರ ಸಭೆಯಲ್ಲಿ ತಿಳಿಸಿದರು.

ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಕೂಡ ರಾಜ್ಯದಲ್ಲಿ ಎಸ್‌ಐಆರ್ ವಿರುದ್ಧ ಸೋಮವಾರ ಸರ್ವೋಚ್ಚ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News