×
Ad

ವಿಧಾನಸಭಾ ಉಪಚುನಾವಣೆ : ನಿಲಂಬೂರ್‌ನಲ್ಲಿ ಅತಿ ಹೆಚ್ಚು ಆರಂಭಿಕ ಮತದಾನ

Update: 2025-06-19 12:11 IST

ಸಾಂದರ್ಭಿಕ ಚಿತ್ರ (PTI)

ಹೊಸದಿಲ್ಲಿ : ಪಂಜಾಬ್, ಪಶ್ಚಿಮ ಬಂಗಾಳ, ಗುಜರಾತ್ ಮತ್ತು ಕೇರಳ ರಾಜ್ಯದ ಐದು ವಿಧಾನಸಭಾ ಸ್ಥಾನಗಳಿಗೆ ಉಪಚುನಾವಣೆಗೆ ಮತದಾನ ನಡೆಯುತ್ತಿದೆ.

ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಮಾಹಿತಿಯ ಪ್ರಕಾರ, ಬೆಳಿಗ್ಗೆ 9 ಗಂಟೆ ವೇಳೆಗೆ ಕೇರಳದ ನಿಲಂಬೂರ್ ಕ್ಷೇತ್ರದಲ್ಲಿ ಅತಿ ಹೆಚ್ಚು ಅಂದರೆ 13.15% ಮತದಾನವಾಗಿದೆ. ಗುಜರಾತ್‌ನ ವಿಸಾವದರ್ ಕ್ಷೇತ್ರದಲ್ಲಿ 12.10%, ಪಶ್ಚಿಮ ಬಂಗಾಳದ ಕಾಳಿಗಂಜ್ ಕ್ಷೇತ್ರದಲ್ಲಿ 10.83%, ಗುಜರಾತ್‌ನ ಕಾಡಿ ಕ್ಷೇತ್ರದಲ್ಲಿ 9.05% ಮತ್ತು ಪಂಜಾಬ್‌ನ ಲುಧಿಯಾನ ಪಶ್ಚಿಮ ಕ್ಷೇತ್ರದಲ್ಲಿ 8.50% ಮತದಾನವಾಗಿದೆ.

ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಬೆಳಿಗ್ಗೆ 7 ಗಂಟೆಗೆ ಮತದಾನ ಪ್ರಾರಂಭವಾಗಿದೆ. ಜೂನ್ 23ರಂದು ಚುನಾವಣಾ ಫಲಿತಾಂಶ ಹೊರಬರಲಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News