×
Ad

ಬಿಜೆಪಿಯಿಂದ ಪ್ರಜಾಪ್ರಭುತ್ವ, ಸಂವಿಧಾನದ ನೀತಿಗಳ ಕೊಲೆ : ಖರ್ಗೆ ಟ್ವೀಟ್

Update: 2024-01-30 22:11 IST

ಮಲ್ಲಿಕಾರ್ಜುನ ಖರ್ಗೆ | Photo: x \ @kharge

ಹೊಸದಿಲ್ಲಿ : “ಗಾಂಧೀಜಿಯವರು ಹುತಾತ್ಮರಾದ ದಿನದಂದು ಗೋಡ್ಸೆ ಆರಾಧಕ ಬಿಜೆಪಿಯು ಪ್ರಜಾಪ್ರಭುತ್ವ, ಸಂವಿಧಾನದ ನೀತಿಗಳನ್ನು ಕೊಲೆ ಮಾಡಿದೆ” ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟ್ವೀಟ್ ಮಾಡಿದ್ದಾರೆ.

“ಚಂಡೀಗಢ ಮೇಯರ್ ಚುನಾವಣೆಯಲ್ಲಿ ಬಿಜೆಪಿಯ ಆಜ್ಞೆಯ ಮೇರೆಗೆ ಚುನಾವಣಾ ಯಂತ್ರಗಳ ದುರುಪಯೋಗವು ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳಲ್ಲಿ ಜನರ ವಿಶ್ವಾಸವನ್ನು ಮತ್ತಷ್ಟು ಕುಗ್ಗಿಸುತ್ತದೆ. ನಾನು ನಿನ್ನೆ ಹೇಳಿದಂತೆ, 2024 ನಮಗೆ ಪ್ರಜಾಪ್ರಭುತ್ವವನ್ನು ಉಳಿಸಲು ಕೊನೆಯ ಅವಕಾಶವಾಗಿದೆ. ಬಿಜೆಪಿಯಿಂದ ರಕ್ಷಿಸಲು ನಾವು ಒಗ್ಗೂಡದಿದ್ದರೆ ನಮ್ಮ ಮುಂದಿನ ಪೀಳಿಗೆ ಪಶ್ಚಾತ್ತಾಪ ಪಡಬೇಕಾಗುತ್ತದೆ” ಎಂದು ಅವರು ತಮ್ಮ ಪೋಸ್ಟ್ ನಲ್ಲಿ ಕಳವಳ ವ್ಯಕ್ತಪಡಿಸಿದ್ದಾರೆ.

“ಗಾಂಧೀಜಿಯವರ #ಹುತಾತ್ಮ ದಿನದಂದು, ಗೋಡ್ಸೆ ಆರಾಧಕ ಬಿಜೆಪಿಯು ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಎಲ್ಲಾ ನೀತಿಗಳನ್ನು ಕೊಲೆ ಮಾಡಿದೆ” ಎಂದು ಟ್ವೀಟ್ ಮಾಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News