×
Ad

ಬಾಂಬ್ ಬೆದರಿಕೆ; ಬೆಂಗಳೂರಿಗೆ ತೆರಳಬೇಕಿದ್ದ ಪ್ರಯಾಣಿಕರನ್ನು ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಇಳಿಸಿದ ಸಿಬ್ಬಂದಿ

Update: 2023-08-28 13:49 IST

ಸಾಂದರ್ಭಿಕ ಚಿತ್ರ (PTI) 

ಕೊಚ್ಚಿ: ಕೊಚ್ಚಿಯಿಂದ ಬೆಂಗಳೂರಿಗೆ ತೆರಳಲು ಸಿದ್ಧವಾಗಿದ್ದ ಇಂಡಿಗೊ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿದ್ದರಿಂದ, ವಿಮಾನದಲ್ಲಿನ ಪ್ರಯಾಣಿಕರನ್ನು ಕೊಚ್ಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೇ ಇಳಿಸಿರುವ ಘಟನೆ ಸೋಮವಾರ ನಡೆದಿದೆ ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ ಎಂದು indianexpress.com ವರದಿ ಮಾಡಿದೆ.

ಸೋಮವಾರ ಬೆಳಗ್ಗೆ 10.30 ಗಂಟೆಗೆ ವಿಮಾನ ಸಂಖ್ಯೆ 6E482 ಕೊಚ್ಚಿಯಿಂದ ಬೆಂಗಳೂರಿಗೆ ತೆರಳಬೇಕಿತ್ತು.

ವಿಮಾನದಲ್ಲಿ ಬಾಂಬ್ ಇರಿಸಲಾಗಿದೆ ಎಂಬ ಬೆದರಿಕೆ ಕರೆ ಬರುತ್ತಿದ್ದಂತೆಯೇ ವಿಮಾನ ಪ್ರಯಾಣಕ್ಕೆ ಸಿದ್ಧವಾಗಿದ್ದ ಪ್ರಯಾಣಿಕರನ್ನು ವಿಮಾನ ನಿಲ್ದಾಣದಲ್ಲೇ ಕೆಳಗಿಳಿಸಿ, ಹೆಚ್ಚಿನ ತಪಾಸಣೆಗಾಗಿ ವಿಮಾನವನ್ನು ಪ್ರತ್ಯೇಕ ಸ್ಥಳಕ್ಕೆ ಕರೆದೊಯ್ಯಲಾಯಿತು ಎಂದು ವಿಮಾನ ನಿಲ್ದಾಣದ ಮೂಲಗಳು ಹೇಳಿವೆ.

ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ ಬಂದಿರುವುದು ನಿಜ ಎಂದು ದೃಢಪಡಿಸಿರುವ ನೆದುಂಬಸ್ಸೆರಿ ಪೊಲೀಸರು, ಈ ಕುರಿತು ಪ್ರಾಥಮಿಕ ತನಿಖೆ ನಡೆಸಲು ತಂಡವೊಂದನ್ನು ಸ್ಥಳಕ್ಕೆ ರವಾನಿಸಲಾಗಿದೆ ಎಂದು ತಿಳಿಸಿದ್ದಾರೆ.

ಪೊಲೀಸ್ ತಂಡದ ಪ್ರಾಥಮಿಕ ತನಿಖೆಯ ನಂತರವಷ್ಟೇ ಮತ್ತಷ್ಟು ವಿವರಗಳು ಲಭ್ಯವಾಗಲಿವೆ ಎಂದು ಪೊಲೀಸರು ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News