×
Ad

ಕೊಲ್ಕತ್ತಾ ವೈದ್ಯೆಯ ಅತ್ಯಾಚಾರ, ಕೊಲೆ ಪ್ರಕರಣ:‌ ಸಂದೀಪ್ ಘೋಷ್ ಬಂಧನ

Update: 2024-09-15 09:34 IST

PC: PTI

ಕೋಲ್ಕತಾ : ನ್ಯಾಯಾಂಗ ಬಂಧನದಲ್ಲಿರುವ ಆರ್‌ಜಿ ಕರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಅವರನ್ನು ಸಿಬಿಐ ಶನಿವಾರ ಬಂಧಿಸಿದೆ. ಹಣಕಾಸು ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಈಗಾಗಲೇ ನ್ಯಾಯಾಂಗ ಬಂಧನದಲ್ಲಿದ್ದರು.

ವೈದ್ಯೆಯ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷ್ಯಾಧಾರ ನಾಶ ಮಾಡಿರುವ ಆರೋಪದಲ್ಲಿ ಘೋಷ್ ಅವರನ್ನು ಬಂಧಿಸಲಾಗಿದೆ ಎಂದು ಸಿಬಿಐ ತಿಳಿಸಿದೆ.

ಎಫ್‌ಐಆರ್‌ ದಾಖಲಿಸಲು ವಿಳಂಬ, ಸಾಕ್ಷ್ಯ ನಾಶ ಮತ್ತು ಪ್ರಕರಣದ ದಾರಿ ತಪ್ಪಿಸಿದ ಆರೋಪದಲ್ಲಿ ಪ್ರಕರಣದಲ್ಲಿ ಕೋಲ್ಕತಾ ತಲಾ ಠಾಣೆಯ ಪೊಲೀಸ್ ಅಧಿಕಾರಿ ಅಭಿಜಿತ್ ಮೊಂಡಲ್ ಅವರನ್ನೂ ಸಿಬಿಐ ಬಂಧಿಸಿದೆ ಎಂದು ತಿಳಿದು ಬಂದಿದೆ.

ವೈದ್ಯೆಯ ಅತ್ಯಾಚಾರ ಪ್ರಕರಣದ ತನಿಖೆ ನಡೆಯುತ್ತಿರುವಾಗಲೇ, ಕಾಲೇಜಿನಲ್ಲಿ ಹಣಕಾಸು ಅವ್ಯವಹಾರ ನಡೆದಿರುವ ಆರೋಪದಲ್ಲಿ ಸೆಪ್ಟೆಂಬರ್ 2 ರಂದು ಘೋಷ್‌ ಅವರನ್ನು ಸಿಬಿಐ ಬಂಧಿಸಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಮೂವರನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News